27ರಂದು ಥ್ರೋಬಾಲ್ ಪಂದ್ಯಾವಳಿ

ballekere santosh
ಬಳ್ಳೇಕೆರೆ ಸಂತೋಷ್
Published on

ಶಿವಮೊಗ್ಗ: ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಜನ್ಮದಿನದ ಅಂಗವಾಗಿ ಜಿಲ್ಲಾ ಥ್ರೋಬಾಲ್ ಸಂಸ್ಥೆಯಿಂದ ಫೆ.27ರಂದು ನೆಹರು ಕ್ರೀಡಾಂಗಣದಲ್ಲಿ ಮಹಿಳೆಯರು ಮತ್ತು ಪುರುಷರಿಗಾಗಿ ಜಿಲ್ಲಾ ಮಟ್ಟದ ಹೊನಲು-ಬೆಳಕಿನ ಥ್ರೋಬಾಲ್ ಪಂದ್ಯಾವಳಿ ಆಯೋಜಿಸಲಾಗಿದೆ ಎಂದು ಸಂಸ್ಥೆ ಸಂಚಾಲಕ ಸಂತೋಷ್ ಬಳ್ಳೇಕೆರೆ ತಿಳಿಸಿದರು.

ಮಹಿಳೆಯರು ಮತ್ತು ಪುರುಷರ 15 ತಂಡಗಳು ಭಾಗವಹಿಸಲಿವೆ. ಎರಡು ಅಂಕಣದಲ್ಲಿ ಪಂದ್ಯಾವಳಿ ನಡೆಯಲಿದೆ. ಪ್ರಥಮ ಬಹುಮಾನ 6 ಸಾವಿರ, ದ್ವಿತೀಯ ನಾಲ್ಕು, ತೃತೀಯ ಮೂರು ಹಾಗೂ ನಾಲ್ಕನೇ ಸ್ಥಾನ ಪಡೆದ ತಂಡಕ್ಕೆ ಎರಡು ಸಾವಿರ ರೂ. ನಗದು ಪುರಸ್ಕಾರ ನೀಡಲಾಗುವುದು ಎಂದು ಸೋಮವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.

27ರ ಬೆಳಗ್ಗೆ 10ಕ್ಕೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಉಪಸ್ಥಿತಿಯಲ್ಲಿ ಸಂಸದ ಬಿ.ವೈ.ರಾಘವೇಂದ್ರ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಪಂದ್ಯಾವಳಿ ಉದ್ಘಾಟಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಶಾಸಕ ಎಸ್.ಎನ್.ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯ ಡಾ. ಧನಂಜಯ ಸರ್ಜಿ ಮುಂತಾದವರು ಭಾಗವಹಿಸಲಿದ್ದಾರೆ. ಉದ್ಘಾಟನೆಗೂ ಮುನ್ನ ರವೀಂದ್ರನಗರ ಗಣಪತಿ ದೇವಸ್ಥಾನದಲ್ಲಿ ಬಿಎಸ್‌ವೈ ಪರವಾಗಿ ವಿಶೇಷ ಪೂಜೆ ಸಲ್ಲಿಸಲಾಗುತ್ತದೆ ಎಂದರು.

ಅದೇ ದಿನ ಸಂಜೆ 6.30ಕ್ಕೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸೂಡಾ ಮಾಜಿ ಅಧ್ಯಕ್ಷ ಎಸ್.ಎಸ್.ಜ್ಯೋತಿಪ್ರಕಾಶ್, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ, ವಿಧಾನ ಪರಿಷತ್ ಸದಸ್ಯ ಡಿ.ಎಸ್.ಅರುಣ್ ಮತ್ತಿತರರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

ಪ್ರಮುಖರಾದ ರಾಜೇಶ್ ಕಾಮತ್, ರಾಮಚಂದ್ರಪ್ಪ ಎಚ್. ತಿಮ್ಮೇನಹಳ್ಳಿ, ಕೆ.ಜಿ.ಮಠಪತಿ, ದಿವಾಕರ ಶೆಟ್ಟಿ, ಹನುಮಂತಪ್ಪ, ರಾಜೇಶ್ವರಿ, ಸವಿತಾ ಸುದ್ದಿಗೋಷ್ಠಿಯಲ್ಲಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net