

ರಾಜನಂದಗಾಂವ್ (ಛತ್ತೀಗಢ): ಸಿಡಿಲು ಬಡಿದು (Thunderbolt) ಸಿಡಿಲು ಬಡಿದು ಶಾಲಾ ಮಕ್ಕಳು ಸೇರಿದಂತೆ 8 ಮಂದಿ ಸಾವು! ಐವರು ಶಾಲಾ ಮಕ್ಕಳು ಸೇರಿದಂತೆ ಎಂಟು ಜನರು ಸಾವನ್ನಪ್ಪಿದ್ದು, ಒಬ್ಬರು ಗಾಯಗೊಂಡಿರುವ ಘಟನೆ ಛತ್ತೀಗಢ ರಾಜನಂದಗಾಂವ್ ಜಿಲ್ಲೆಯ ಹಳ್ಳಿಯೊಂದರಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮ್ನಿ ಪೊಲೀಸ್ ಠಾಣೆ ವ್ಯಾಪ್ತಿಯ ಜೋರತರಾಯ್ ಗ್ರಾಮದಲ್ಲಿ ಮಧ್ಯಾಹ್ನ 1.30 ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಅವರು ತಿಳಿಸಿದ್ದಾರೆ.
ಪ್ರಾಥಮಿಕ ಮಾಹಿತಿಯ ಪ್ರಕಾರ, ಸಿಡಿಲು ಬಡಿದು ಐವರು ಶಾಲಾ ಮಕ್ಕಳು ಸೇರಿದಂತೆ ಎಂಟು ಜನರು ಸಾವಿಗೀಡಾಗಿದ್ದಾರೆ. ಘಟನೆಯಲ್ಲಿ ಓರ್ವ ವ್ಯಕ್ತಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ರಾಜನಂದಗಾಂವ್ ಎಂದು ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಮೋಹಿತ್ ಗಾರ್ಗ್ ತಿಳಿಸಿದ್ದಾರೆ.
ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಅದೇ ಕಟ್ಟಡದಲ್ಲಿದ್ದ ಓರ್ವ ವ್ಯಕ್ತಿ ಸುರಕ್ಷಿತವಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಅವರು ತಿಳಿಸಿದ್ದಾರೆ.