ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಭಾರೀ ಮಳೆ: ಹವಾಮಾನ ಇಲಾಖೆ.. Karnataka Weather

rain
Published on

ಬೆಂಗಳೂರು:  (  Karnataka Weather ) ಬೆಂಗಳೂರು ಸೇರಿ ರಾಜ್ಯದ 18 ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಂಡಿರುವ ಹಿನ್ನೆಲೆ ತೆಲಂಗಾಣ, ತಮಿಳುನಾಡು, ಕರ್ನಾಟಕದ ಹಲವೆಡೆ ಮಳೆಯಾಗುತ್ತಿದೆ. ರಾಜ್ಯದಲ್ಲಿ ಮುಂದಿನ ಮೂರು ದಿನಗಳ ಕಾಲ ಮಳೆ ಆಗಲಿದೆ ಅಂತ ಹವಾಮಾನ ಇಲಾಖೆ ಹೇಳಿದೆ.

ಕರ್ನಾಟಕದ ದಕ್ಷಿಣ ಒಳನಾಡು ಹಾಗೂ ಕರಾವಳಿಯ ಬಹುತೇಕ ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಕನ್ನಡ, ಉಡುಪಿ, ಧಾರವಾಡ, ಗದಗ, ಹಾವೇರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ.

ವಿಜಯನಗರ, ಶಿವಮೊಗ್ಗ, ದಾವಣಗೆರೆ,ಬಳ್ಳಾರಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಬೀದರ್, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡದಲ್ಲಿ ಒಣಹವೆ ಇರಲಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net