ಈ ದಿನ ರಿಲೀಸ್ ಆಗಲಿದೆ ಸಲ್ಮಾನ್ ಖಾನ್ ಅಭಿನಯದ 'ಟೈಗರ್ 3' ಟೀಸರ್!

Untitled design - 2023-08-03T143110.403
Published on

ಮುಂಬೈ: ಬಾಲಿವುಡ್​ ನಟ ಸಲ್ಮಾನ್ ಖಾನ್ ನಟನೆಯ ಬಹುನಿರೀಕ್ಷಿತ 'ಟೈಗರ್​ 3' ಚಿತ್ರಕ್ಕೆ ಕ್ಷಣಗಣನೆ ಆರಂಭಗೊಂಡಿದ್ದು, ಸಿನಿಮಾದ ಟೀಸರ್​ ರಿಲೀಸ್ ಆಗುವ ದಿನಾಂಕದ ಬಗ್ಗೆ ಇದೀಗ ಹೊಸ ಮಾಹಿತಿಯೊಂದು ದೊರಕಿದೆ.

ಈ ಹಿಂದೆ ಸಲ್ಮಾನ್​ ಖಾನ್​ ನಟಿಸಿದ್ದ 'ಕಿಸಿ ಕಾ ಭಾಯ್ ಕಿಸಿ ಕಿ ಜಾನ್' ಚಿತ್ರವು ಸಿನಿಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆಯಲಿಲ್ಲ. ಆದ್ರೆ, ಮುಂಬರುವ 'ಟೈಗರ್​ 3' ಚಿತ್ರದ ಬಗ್ಗೆ ಸಾಕಷ್ಟು ನಿರೀಕ್ಷೆ ವ್ಯಕ್ತವಾಗಿದ್ದು, ಬಿಡುಗಡೆಗೆ ಸಲ್ಮಾನ್​ ಅವರ ಅಭಿಮಾನಿಗಳು ತೀವ್ರ ಕುತೂಹಲದಿಂದ ಕಾಯುತ್ತಿದ್ದಾರೆ. ಮನೀಶ್ ಶರ್ಮಾ ನಿರ್ದೇಶನದ, ಬಿಗ್​ ಬಜೆಟ್​ ಚಿತ್ರವನ್ನು ಯಶ್ ರಾಜ್ ಫಿಲ್ಮ್ಸ್ ನಿರ್ಮಿಸಿದ್ದು, ಚಿತ್ರವು 10 ನವೆಂಬರ್ 2023 ರಂದು ತೆರೆಗೆ ಬರಲು ಸಜ್ಜಾಗಿದೆ.

ಚಿತ್ರದ ಟೀಸರ್ ಇದೇ ಆಗಸ್ಟ್ 15 ರಂದು ಬಿಡುಗಡೆಯಾಗಲಿದ್ದು, ಚಿತ್ರವು ದೇಶಭಕ್ತಿಯ ಹಿನ್ನೆಲೆಯನ್ನು ಹೊಂದಿರುವುದರಿಂದ, ಸ್ವಾತಂತ್ರ್ಯ ದಿನಾಚರಣೆಯ ದಿನದಂದೇ ಟೀಸರ್ ರಿಲೀಸ್​ ಮಾಡಲು ಚಿತ್ರತಂಡ ಯೋಜಿಸಿದೆ. ತಯಾರಕರು ಈ ಸಿನಿಮಾವನ್ನು ಹಿಂದಿ, ತೆಲುಗು ಮತ್ತು ತಮಿಳಿನಲ್ಲಿ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಲಾಗಿದೆ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net