

ಬೆಂಗಳೂರು: ಹುಲಿ ಉಗುರು ಧರಿಸಿದ ಆರೋಪದ ಮೇಲೆ ಬಿಗ್ಬಾಸ್ ಸೀಸನ್ 10ರ ಸ್ಪರ್ಧಿಯಾಗಿದ್ದ ವರ್ತೂರು ಸಂತೋಷ್ ಅವರನ್ನು ಬಂಧನವಾಗುತ್ತಿದ್ದಂತೆ, ಈ ಪ್ರಕರಣದಲ್ಲಿ ಸಿಲುಕೊಂಡಿರುವ ಜಗ್ಗೇಶ್ ಮನೆ ಮೇಲೆ ಅರಣ್ಯಾಧಿಕಾರಿಗಳು ದಾಳಿ ಮಾಡಿದ್ದರು. ಅಧಿಕಾರಿಗಳ ಈ ಕ್ರಮವನ್ನು ಪ್ರಶ್ನೆ ಮಾಡಿ ಕೋರ್ಟ್ ಮೊರೆ ಹೋಗಿದ್ದರು. ಇದೀಗ ಕೋರ್ಟ್ ಜಗ್ಗೇಶ್ ಪರವಾಗಿ ಬ್ಯಾಟ್ ಬಿಸಿದೆ.
ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ಜಗ್ಗೇಶ್ ಪರವಾಗಿ ಕೋರ್ಟ್ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.
ಕೋರ್ಟ್ಗೆ ಜಗ್ಗೇಶ್ ಮನವಿ : ‘ಅರಣ್ಯಾಧಿಕಾರಿಗಳು ನೀಡಿದ ನೋಟಿಸ್ ರದ್ದು ಪಡಿಸಬೇಕು. ನೋಟಿಸ್ಗೆ ಉತ್ತರಿಸುವ ಮೊದಲೇ 14 ಅಧಿಕಾರಿಗಳಿಂದ ದಾಳಿ ನಡೆದಿದೆ. ಮನೆಯಲ್ಲಿನ ವಸ್ತುಗಳನ್ನು ಚೆಲ್ಲಾಪಿಲ್ಲಿ ಮಾಡಿದ್ದಾರೆ. ಸಂದರ್ಶನದಲ್ಲಿ ಹೇಳಿದ ಮಾತನ್ನಾಧರಿಸಿ ತೇಜೋವಧೆ ಮಾಡಲಾಗಿದೆ. ಅರಣ್ಯಾಧಿಕಾರಿಗಳ ಕ್ರಮ ಕಾನೂನುಬಾಹಿರವೆಂದು ಘೋಷಿಸಬೇಕು’ ಎಂಬುದಾಗಿ ಜಗ್ಗೇಶ್ ಪರ ವಕೀಲರು ಅರ್ಜಿಯಲ್ಲಿ ತಿಳಿಸಿದ್ದಾರೆ.
ಕೋರ್ಟ್ ಹೇಳಿದ್ದೇನು?: ಹುಲಿ ಉಗುರು ಹೊಂದಿರುವ ಪ್ರಕರಣದಲ್ಲಿ ನಟ, ರಾಜ್ಯಸಭಾ ಸದಸ್ಯ ಜಗ್ಗೇಶ್ ಅವರು ತೊಂದರೆ ಅನುಭವಿಸಿದ್ದರು. ಅರಣ್ಯ ಇಲಾಖೆ ಅಧಿಕಾರಿಗಳಿಂದ ಜಗ್ಗೇಶ್ಗೆ ನೋಟಿಸ್ ಕೂಡ ನೀಡಲಾಗಿತ್ತು. ಇದಕ್ಕೆ ತಡೆನೀಡಬೇಕು ಎಂದು ಜಗ್ಗೇಶ್ ಅವರು ಹೈಕೋರ್ಟ್ ಮೆಟ್ಟಿಲು ಏರಿದ್ದರು. ಜಗ್ಗೇಶ್ ಪರವಾಗಿ ಕೋರ್ಟ್ ಆದೇಶ ನೀಡಿದೆ. ಜಗ್ಗೇಶ್ ವಿರುದ್ಧ ಅರಣ್ಯಾಧಿಕಾರಿಗಳ ನೋಟಿಸ್ಗೆ ಹೈಕೋರ್ಟ್ ತಡೆ ನೀಡಿದೆ. ಇದರಿಂದ ಜಗ್ಗೇಶ್ ಅವರಿಗೆ ದೊಡ್ಡ ರಿಲೀಫ್ ಸಿಕ್ಕಂತೆ ಆಗಿದೆ.
ವನ್ಯಜೀವಿ ಸಂರಕ್ಷಣಾ ಕಾಯ್ದೆ 1972ರ ಅಡಿಯಲ್ಲಿ: ಯಾವುದೇ ವನ್ಯ ಜೀವಿಗೆ ಸಂಬಂಧಿಸಿದ ವಸ್ತುಗಳು, ಅಂದರೆ ಚರ್ಮ, ಮೂಳೆ. ಕೊಂಬು, ಕೂದಲು ಇತ್ಯಾದಿ ವಸ್ತುಗಳ ಸಂಗ್ರಹ ತಪ್ಪು. ಅಂತಹ ಸಂಗ್ರಹಗಳಿದ್ದರೆ ಕೂಡಲೇ ಇಲಾಖೆಗೆ ಒಪ್ಪಿಸಬೇಕು. ಇಲ್ಲವೇ ಇಲಾಖೆಯಿಂದ ಸೂಕ್ತ ಪ್ರಮಾಣ ಪತ್ರ ಪಡೆಯಬೇಕು. ಅಕ್ರಮ ಎಂದು ಸಾಬೀತಾದರೆ 3 ರಿಂದ 7 ವರ್ಷ ಜೈಲು ಮತ್ತು ಕನಿಷ್ಠ 10000 ರೂ ದಂಡ ವಿಧಿಸುವ ಸಾಧ್ಯತೆ ಇದೆ.