ಉಡುಪಿ ಕಡೆ ಹೋಗುತ್ತಿದ್ದ ಎಕ್ಸ್‌ಪ್ರೆಸ್ ಬಸ್ ಏಕಾಏಕಿ ಬ್ರೇಕ್ ಹಾಕಿದ ಕಾರಣ ಹಿಂದಿನಿಂದ ಬಂದ ಇನೋವಾ ಕಾರು ಡಿಕ್ಕಿ ಹೊಡೆದಿದೆ. ಅಪಘಾತದ ರಭಸಕ್ಕೆ ಕಾರಿನಲ್ಲಿದ್ದ ಮಂಜುನಾಥ ಮೃತಪಟ್ಟಿದ್ದಾರೆ. ಮಂಜುನಾಥ ಹುಲಿ ವೇಷ ಕಲಾವಿದರಾಗಿ ಜನಾನುರಾಗಿಯಾಗಿದ್ದರು. ಕಾರಿನಲ್ಲಿದ್ದ ನಾಲ್ವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಬ್ರಹ್ಮಾವರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.