ಹನಗೋಡಿನಲ್ಲಿ ಹುಲಿ ಹೆಜ್ಜೆ ಪತ್ತೆ

24-HAN-1
Published on

ಹನಗೋಡು : ಹನಗೋಡಿನಲ್ಲಿ ಹುಲಿ ಹೆಜ್ಜೆ ಮತ್ತೆ ಕಾಣಿಸಿಕೊಂಡಿದ್ದು ಗ್ರಾಮಸ್ಥರು ಆತಂಕಗೊಂಡಿದ್ದಾರೆ.


ಗ್ರಾಮದ ತಾಲೂಕು ಪಂಚಾಯಿತಿ ಮಾಜಿ ಸದಸ್ಯ ಎಚ್.ಆರ್.ರಮೇಶ್ ಅವರ ತೋಟದಲ್ಲಿ ಕಳೆದ ಎರಡು ದಿನಗಳ ಹಿಂದೆ ಹುಲಿ ಹೆಜ್ಜೆ ಗುರುತು ಪತ್ತೆಯಾಗಿದೆ. ಹುಲಿಯು ಕಾಡು ಹಂದಿಯನ್ನು ಕಾದಾಡಿ ಭೇಟೆಯಾಡಿರಬಹುದು ಎನ್ನಲಾಗಿತ್ತು. ಸ್ಥಳಕ್ಕೆ ಡಿಆರ್‌ಎ್ಒ ಮಲ್ಲಿಕಾರ್ಜುನ್ ಹಾಗೂ ಸಿಬ್ಬಂದಿ ಭೇಟಿ ನೀಡಿ ಕ್ಯಾಮರಾ ಅಳವಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net