ಪ್ರಜ್ವಲ್ ರೇವಣ್ಣ​ಗೆ ಜೈಲೇ ಗತಿ​? ಜೂ. 24ರವರೆಗೆ ನ್ಯಾಯಾಂಗ ಬಂಧನ

Untitled design (85)
Published on

ಬೆಂಗಳೂರು: ಅತ್ಯಾಚಾರ ಪ್ರಕರಣದಲ್ಲಿ ಹಾಸನದ ಹಾಲಿ ಸಂಸದ ಪ್ರಜ್ವಲ್ ರೇವಣ್ಣಗೆ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಇದೀಗ ಜೂನ್.24ರವರೆಗೂ ನ್ಯಾಯಾಂಗ ಬಂಧನ ವಿಧಿಸಿದೆ. 

ಹೊಳೆನರಸೀಪುರ ಪೊಲೀಸ್ ಠಾಣೆಯಲ್ಲಿ ಅತ್ಯಾಚಾರ ಪ್ರಕರಣ ದಾಖಲಾಗಿತ್ತು. ಮುಚ್ಚಿದ ಲಕೋಟೆಯಲ್ಲಿ ನ್ಯಾಯಾಲಯಕ್ಕೆ ತನಿಖಾ ವರದಿಯನ್ನು ಎಸ್​ಐಟಿ ಅಧಿಕಾರಿಗಳು ಸಲ್ಲಿಸಿದರು. ಇದರ ಬೆನ್ನಲ್ಲೇ ಕೋರ್ಟ್​​ ಪ್ರಜ್ವಲ್ ರೇವಣ್ಣಗೆ ಜೂನ್. 24ರವರೆಗೆ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದೆ. ಶೀಘ್ರವೇ ಪ್ರಜ್ವಲ್​ ರೇವಣ್ಣ ಪರಪ್ಪನ ಅಗ್ರಹಾರಕ್ಕೆ ಶಿಫ್ಟ್​ ಆಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net