ಬೈಕ್‌ಗೆ ಟಿಪ್ಪರ್ ಲಾರಿ ಡಿಕ್ಕಿ; ಬೈಕ್ ಹಿಂಬದಿ ಸವಾರ ಸಾವು

Bike Accident
Published on

ಹಿರೇಕೆರೂರ: ಟಿಪ್ಪರ್ ಲಾರಿ ಬೈಕ್‌ಗೆ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಮೇಲಿದ್ದ ಹಿಂಬದಿ ಸವಾರ ಸ್ಥಳದಲ್ಲಿಯೆ ಮೃತಪಟ್ಟ ಘಟನೆ ತಾಲೂಕಿನ ಯೋಗಿಕೊಪ್ಪ ಗ್ರಾಮದಲ್ಲಿ ಶುಕ್ರವಾರ ಸಂಭವಿಸಿದೆ.
ತಾಲೂಕಿನ ವಡೆಯನಪುರ ಗ್ರಾಮದ ನಿರಂಜನ ಸುಭಾಷಚಂದ್ರ ಮಳವಳ್ಳಿ (22) ಮೃತ ದುರ್ದೈವಿ. ಬೈಕ್ ಓಡಿಸುತ್ತಿದ್ದ ಗಣೇಶ ಕೊಡಗನೂರ ಎಂಬುವರಿಗೆ ಚಿಕ್ಕಪುಟ್ಟ ಗಾಯಗಳಾಗಿವೆ.
ಇವರು ಯೋಗಿಕೊಪ್ಪ ಗ್ರಾಮದಿಂದ ಹಂಸಭಾವಿಗೆ ಬರುತ್ತಿದ್ದ ಸಮಯದಲ್ಲಿ ದಾರಿ ಮಧ್ಯೆ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಇದರಿಂದಾಗಿ ನಿರಂಜನ ಸ್ಥಳದಲ್ಲಿಯೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಹಂಸಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net