ದೆಹಲಿಯಲ್ಲಿ ನಾಳೆ ‘ತಿರಂಗಾ ಮಾರ್ಚ್’: ಅಭಿಜೀತ್ ದೀಪ್ಕೆ ಪ್ರತಿಭಟನೆಗೆ ಅವಕಾಶ | Delhi Tiranga March

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ಅಕ್ಟೋಬರ್ 16ರಂದು ತಿರಂಗಾ ಮಾರ್ಚ್ ನಡೆಸಲು ಕಾಕ್ರೋಚ್ ಜನತಾ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ ನೀಡಿದ್ದಾರೆ. ಪ್ರತಿಭಟನೆ ವೇಳೆ ಕಾನೂನು ಸುವ್ಯವಸ್ಥೆ ಕಾಪಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ದೆಹಲಿ ಪೊಲೀಸರು ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.
Abhijeet Deepke allowed to protest
ಅಭಿಜೀತ್ ದೀಪ್ಕೆ ಪ್ರತಿಭಟನೆಗೆ ಪೊಲೀಸರ ಕಟ್ಟೆಚ್ಚರ
Published on: 
Summary

ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ನಾಳೆ ತಿರಂಗಾ ಮಾರ್ಚ್‌ಗೆ ಕರೆ

ಸೆಂಟ್ರಲ್ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಅಭಿಜೀತ್ ದೀಪ್ಕೆ ಮನವಿ

ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವುದಾಗಿ ಹೈಕೋರ್ಟ್‌ಗೆ ಪೊಲೀಸರ ಭರವಸೆ

Abhijeet Dipke Protest: ದೆಹಲಿಯ ಕನ್ನಾಟ್ ಪ್ಲೇಸ್‌ನಲ್ಲಿ ತಿರಂಗಾ ಮಾರ್ಚ್ ನಡೆಸಲು ಕಾಕ್ರೋಚ್ ಜನತಾ ಪಾರ್ಟಿ (CJP) ಸಂಸ್ಥಾಪಕ ಅಭಿಜೀತ್ ದೀಪ್ಕೆ ಕರೆ ನೀಡಿದ್ದು, ಪ್ರತಿಭಟನೆಯ ಸಂದರ್ಭದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಎಲ್ಲ ರೀತಿಯ ಕ್ರಮ ಕೈಗೊಳ್ಳುವುದಾಗಿ ದೆಹಲಿ ಪೊಲೀಸರು ಹೈಕೋರ್ಟ್‌ಗೆ ಭರವಸೆ ನೀಡಿದ್ದಾರೆ.

ಕನ್ನಾಟ್ ಪ್ಲೇಸ್‌ನ ಸೆಂಟ್ರಲ್ ಪಾರ್ಕ್‌ನಲ್ಲಿ ಸಂಜೆ 5 ಗಂಟೆಗೆ ರಾಷ್ಟ್ರಧ್ವಜ ಹಿಡಿದು ಸೇರಲು ದೀಪ್ಕೆ ಜನರಿಗೆ ಮನವಿ ಮಾಡಿದ್ದಾರೆ. ‘ಲಹರಾ ದೋ ತಿರಂಗಾ’ ಎಂಬ ಘೋಷವಾಕ್ಯದಡಿ ನಡೆಯಲಿರುವ ಈ ಮೆರವಣಿಗೆ, ತ್ರಿವರ್ಣ ಧ್ವಜ ಹಾರಿಸುವುದು ಅಪರಾಧವಲ್ಲ ಎಂಬ ಸಂದೇಶ ಸಾರಲಿದೆ ಎಂದು ಅವರು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ತಿಳಿಸಿದ್ದಾರೆ. ದೆಹಲಿಗೆ ಬರಲು ಸಾಧ್ಯವಾಗದವರು ತಮ್ಮ ತಮ್ಮ ನಗರಗಳಲ್ಲೂ ಇದೇ ರೀತಿಯ ಮೆರವಣಿಗೆಗಳನ್ನು ಆಯೋಜಿಸುವಂತೆ ದೀಪ್ಕೆ ಮನವಿ ಮಾಡಿದ್ದಾರೆ.

ಈ ಬೆಳವಣಿಗೆಗೆ ಮುನ್ನ, ಜಂತರ್ ಮಂತರ್‌ನಲ್ಲಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಉಲ್ಲಂಘಿಸಿದ ಆರೋಪದ ಹಿನ್ನೆಲೆಯಲ್ಲಿ ಕಾಕ್ರೋಚ್ ಜನತಾ ಪಾರ್ಟಿಯ ನಾಯಕರಾದ ಸೌರವ್ ದಾಸ್ ಮತ್ತು ಆಶುತೋಷ್ ರಾಂಕಾರನ್ನು ಬಂಧಿಸಲಾಗಿತ್ತು. ಬಳಿಕ ಅವರನ್ನು ಐದು ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಿಹಾರ್ ಜೈಲಿಗೆ ಕಳುಹಿಸಲಾಗಿದೆ.

ಇದನ್ನೂ ಓದಿ: ಗುಜರಾತ್‌ನ ‘ಸ್ವಚ್ಛ ಪರಿಸರ ಯಾತ್ರೆ’: 906 ಟನ್ ತ್ಯಾಜ್ಯ ನಿರ್ವಹಣೆ, ಭಕ್ತರಿಗೆ ಪರಿಸರ ಜಾಗೃತಿ! | Swachh Paryavaran Yatra

ಈ ಹಿನ್ನೆಲೆಯಲ್ಲಿ ಪ್ರತಿಭಟನೆಗೆ ಕರೆ ನೀಡಿರುವ ದೀಪ್ಕೆ ಮತ್ತು ಅವರ ಪಕ್ಷದ ಚಟುವಟಿಕೆಗಳ ಮೇಲೆ ನಿಗಾ ವಹಿಸುವುದಾಗಿ ದೆಹಲಿ ಪೊಲೀಸರು ಹೈಕೋರ್ಟ್‌ಗೆ ತಿಳಿಸಿದ್ದಾರೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net