ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಟಯರ್ ಸ್ಫೋಟ; 37 ಜನರಿಗೆ ಗಾಯ, ನಾಲ್ವರು ಗಂಭೀರ

picup
Published on

ಬಳ್ಳಾರಿ: ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವಾಹನದ ಟಯರ್ ಸ್ಫೋಟಗೊಂಡು ಆಗಿ 37 ಜನರು ಗಾಯಗೊಂಡಿದ್ದಾರೆ. ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆ ಬಳಿ ಬೊಲೆರೋ ಪಿಕ್​ಅಪ್​ ವಾಹನದ ಟೈರ್ ಸ್ಫೋಟದಿಂದ ಅವಘಢ ಸಂಭವಿಸಿದೆ.

ಪಿಕ್​ಅಪ್ ವಾಹನದಲ್ಲಿ 40 ಜನ ಕೂಲಿ ಕಾರ್ಮಿಕರನ್ನು ಕರೆದೊಯ್ಯಲಾಗುತ್ತಿತ್ತು. ಮೆಣಸಿನಕಾಯಿ ಕಟಾವಿಗೆ ತೆರಳಿದ್ದ ಕಾರ್ಮಿಕರು ಕೆಲಸ ಮುಗಿಸಿ ಮನೆಗೆ ಹಿಂತಿರುಗಿತ್ತಿದ್ದರು. ಈ ವೇಳೆ ಅಪಘಾತ ಸಂಭವಿಸಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ಟೈರ್ ಸ್ಫೋಟಗೊಳ್ಳುತ್ತಿದ್ದಂತೆ ರಸ್ತೆ ತಡೆ ಗೋಡೆಗೆ ವಾಹನ ಡಿಕ್ಕಿ ಹೊಡೆದಿದೆ. ವಾಹನ ವೇಗದಲ್ಲಿ ತೆರಳುತ್ತಿದ್ದಾಗ ಘಟನೆ ಸಂಭವಿಸಿದ್ದು, ಡಿಕ್ಕಿ ಹೊಡೆದ ರಭಸಕ್ಕೆ ಪಿಕ್​ಅಪ್ ವಾಹನದ ಹಿಂಬದಿ ಇದ್ದ ಕಾರ್ಮಿಕರು ನೆಲಕ್ಕೆ ಬಿದ್ದಿದ್ದಾರೆ. ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕೂಡಲೇ ಬಳ್ಳಾರಿ ಮಿಮ್ಸ್ ಆಸ್ಪತ್ರೆಗೆ ರವಾನಿಸಿ, ಚಿಕಿತ್ಸೆಗೆ ಒಳಪಡಿಸಲಾಗಿದೆ. ತೆಕ್ಕಲಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net