ರೋಗ ಹರಡದಂತೆ ಎಚ್ಚರ ವಹಿಸಿ

tth sabhe
ತೀರ್ಥಹಳ್ಳಿ ಪಪಂ ಸಭೆಯಲ್ಲಿ ತಹಸೀಲ್ದಾರ್ ಜಕ್ಕನಗೌಡರ್, ಕುರಿಯಾ ಕೋಸ್, ರಮೇಶ್ ಇತರರಿದ್ದರು.
Published on

ತೀರ್ಥಹಳ್ಳಿ: ತಾಲೂಕಿನಲ್ಲಿ ಸುಮಾರು 30 ಡೆಂೆ ಪ್ರಕರಣಗಳು ದಾಖಲಾಗಿದ್ದು, 100ಕ್ಕೂ ಹೆಚ್ಚು ಮಂದಿಯಲ್ಲಿ ರೋಗದ ಲಕ್ಷಣಗಳು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಪಟ್ಟಣ ವ್ಯಾಪ್ತಿಯಲ್ಲಿ ರೋಗ ಹರಡದಂತೆ ಅಗತ್ಯ ಕ್ರಮ ಕೈಗೊಳ್ಳಲು ಸೋಮವಾರ ಪಪಂ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಗ್ರಹಿಸಿದರು.
ಪಪಂ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನ ಖಾಲಿ ಇರುವ ಹಿನ್ನೆಲೆಯಲ್ಲಿ ಆಡಳಿತಾಧಿಕಾರಿ ತಹಸೀಲ್ದಾರ್ ಜಕ್ಕನಗೌಡರ್ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು. ಪಟ್ಟಣ ವ್ಯಾಪ್ತಿಯಲ್ಲೂ ಮೂವರಲ್ಲಿ ರೋಗ ಕಾಣಿಸಿಕೊಂಡಿರುವ ಬಗ್ಗೆ ವರದಿಯಾಗಿದೆ. ಇತ್ತೀಚಿನ ದಿನಗಳಲ್ಲಿ ಸೊಳ್ಳೆಗಳ ಕಾಟ ವಿಪರೀತವಾಗಿದ್ದು ಡೆಂೆ ಭೀತಿಯೂ ಹೆಚ್ಚುತ್ತಿದೆ. ಸೊಳ್ಳೆ ನಿಯಂತ್ರಣದ ಸಲುವಾಗಿ ಪ್ರತಿ ವಾರ್ಡ್‌ಗಳಲ್ಲಿ ಸೊಳ್ಳೆ ನಾಶಕ ಸಿಂಪಡಿಸುವಂತೆ ಆಗ್ರಹಿಸಲಾಯಿತು.
ಸದಸ್ಯ ಸಂದೇಶ್ ಜವಳಿ ಮಾತನಾಡಿ, ಲಕ್ಷಾಂತರ ರೂ. ತೆರಿಗೆ ವಸೂಲಿಯಾಗದ ಕಾರಣ ಪಪಂ ಸಂಪನ್ಮೂಲ ಕ್ರೋಡೀಕರಣ ಸಾಧ್ಯವಾಗಿಲ್ಲ. ಈ ಬಗ್ಗೆ ಬೆಂಗಳೂರು ಮಹಾನಗರ ಪಾಲಿಕೆ ಆಡಳಿತ ತೆಗೆದುಕೊಂಡಿರುವ ಮಾದರಿಯಲ್ಲಿ ಜಿಲ್ಲಾಧಿಕಾರಿಗಳ ಮಾರ್ಗದರ್ಶನ ಪಡೆದು ಬಾಕಿ ಇರುವ ತೆರಿಗೆ ವಸೂಲಿ ಮಾಡುವುದು ಸೂಕ್ತ ಎಂದು ಸಲಹೆ ನೀಡಿದರು.
ಪಟ್ಟಣ ವ್ಯಾಪ್ತಿಯ ಮನೆಗಳಿಗೆ ವಿತರಿಸಲು ತರಿಸಿರುವ ಡಸ್ಟ್‌ಬಿನ್ ಮೂರ‌್ನಾಲ್ಕು ತಿಂಗಳಿಂದ ವಿತರಣೆ ಮಾಡದಿರುವ ಬಗ್ಗೆ ಕಾಂಗ್ರೆಸ್, ಬಿಜೆಪಿ ಸದಸ್ಯರು ಆಕ್ಷೇಪಿಸಿದರು. ಸ್ಥಾಯಿ ಸಮಿತಿ ಕಾರ್ಯದ ಬಗ್ಗೆ ಬಿಜೆಪಿ ಸದಸ್ಯರು ನೀಡಿದ ಹೇಳಿಕೆ ಕುರಿತು ಪ್ರತಿಕ್ರಿಯೆ ನೀಡುವ ವೇಳೆ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಗಣಪತಿ ಮಾತಿಗೆ ಬೇಸರ ವ್ಯಕ್ತಪಡಿಸಿದ ಬಿಜೆಪಿ ಸದಸ್ಯರು ಉಪಾಹಾರವನ್ನು ತಿರಸ್ಕರಿಸಿ ವಿರೋಧ ವ್ಯಕ್ತಪಡಿಸಿದರು. ಪಪಂ ಮುಖ್ಯಾಧಿಕಾರಿ ಕುರಿಯಾಕೋಸ್, ಆರೋಗ್ಯಾಧಿಕಾರಿ ರಮೇಶ್ ಇದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net