ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ! ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪಾವಿತ್ರ್ಯತೆ ಇರುವುದಿಲ್ಲ: ಸದ್ಗುರು

Sadhguru
Published on

ಹೈದ್ರಾಬಾದ್​: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬಿನಂಶವಿದೆ ಎಂಬ ಆರೋಪದ  ಹಿನ್ನೆಲೆಯಲ್ಲಿ,  ಇಶಾ ಫೌಂಡೇಶನ್ ಸಂಸ್ಥಾಪಕ ಹಾಗೂ ಆಧ್ಯಾತ್ಮಿಕ ಗುರು ಸದ್ಗುರು ವಾಸುದೇವ್  ಬೇಸರ ಹೊರಹಾಕಿದ್ದಾರೆ.

ಸಾಮಾಜಿಕ ಮಾಧ್ಯಮ ಪ್ಲಾಟ್‌ಫಾರ್ಮ್ ಎಕ್ಸ್‌ನಲ್ಲಿ, “ ಭಕ್ತರು ತಿನ್ನುವ ದೇವಸ್ಥಾನದ ಪ್ರಸಾದವು ಅಸಹ್ಯಕರವಾಗಿದೆ. ಅದಕ್ಕಾಗಿಯೇ ದೇವಸ್ಥಾನಗಳು ಭಕ್ತರಿಂದ ನಡೆಯಬೇಕೇ ಹೊರತು ಸರ್ಕಾರದ ಆಡಳಿತದಿಂದಲ್ಲ. ಎಲ್ಲಿ ಭಕ್ತಿ ಇಲ್ಲವೋ ಅಲ್ಲಿ ಪವಿತ್ರತೆ ಇರುವುದಿಲ್ಲ. ಹಿಂದೂ ದೇವಾಲಯಗಳನ್ನು ಹಿಂದೂಗಳು ನಡೆಸ ಬೇಕೆ ಹೊರತು ಸರ್ಕಾರದ ಆಡಳಿತದಿಂದಲ್ಲ ಪೋಸ್ಟ್‌ ಮಾಡಿದ್ದಾರೆ.

ಪ್ರಸಿದ್ಧ ತಿರುಪತಿ ದೇವಸ್ಥಾನದ ಪ್ರಸಾದದಲ್ಲಿ ತುಪ್ಪ ಬಳಸುವ ಬದಲಾಗಿ  ಪ್ರಾಣಿಗಳ ಕೊಬ್ಬು ಮಿಶ್ರಣ ಮಾಡಲಾಗಿದೆ ಎಂಬ ವರದಿಗೆ ಪ್ರತಿಕ್ರಿಯೆಯಾಗಿ ಅವರು ಈ ಟ್ವೀಟ್ ಮಾಡಿದ್ದಾರೆ. ಈ ವಿಚಾರವಾಗಿ ದೇಶಾದ್ಯಂತ ಆಕ್ರೋಶ ವ್ಯಕ್ತವಾಗುತ್ತಿದೆ. ಸಾರ್ವಜನಿಕ ಪ್ರತಿಭಟನೆಯ ನಡುವೆ, ಹಿಂದೂ ದೇವಾಲಯಗಳ ಪಾವಿತ್ರ್ಯತೆ ಮತ್ತು ಸಮಗ್ರತೆಯನ್ನು ಕಾಪಾಡುವ ಉದ್ದೇಶದಿಂದ ದೇವಾಲಯದ ನಿರ್ವಹಣೆಯನ್ನು ಭಕ್ತರಿಗೆ ಹಿಂದಿರುಗಿಸಬೇಕೆಂಬ ಬೇಡಿಕೆಗಳು ಹೆಚ್ಚುತ್ತಿವೆ.

ತಿರುಮಲ ತಿರುಪತಿ ಶ್ರೀವಾರಿ ಲಡ್ಡು ತಯಾರಿಸಲು ಬಳಸುವ ತುಪ್ಪದಲ್ಲಿ ಪ್ರಾಣಿಗಳ ಕೊಬ್ಬಿನ ಕುರುಹು ಕಂಡುಬಂದಿದೆ ಎಂಬ ಇತ್ತೀಚಿನ ಲ್ಯಾಬ್ ವರದಿಯು ದೇಶಾದ್ಯಂತ ಸಂಚಲನ ಮೂಡಿಸಿದೆ. ವೈಸಿಪಿ ಸರ್ಕಾರದ ಅವಧಿಯಲ್ಲಿ ತುಪ್ಪದ ಕಲಬೆರಕೆ ಬಗ್ಗೆ ಹಿಂದೂಗಳು ತೀವ್ರ ಕಳವಳ ವ್ಯಕ್ತಪಡಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಸಿಎಂ ಚಂದ್ರಬಾಬು ನಾಯ್ಡು ಅವರು ಲಡ್ಡೂ ತಯಾರಿಕೆಯಲ್ಲಿ ಕಲಬೆರಕೆ ತುಪ್ಪದ ಬಗ್ಗೆ ಎಸ್‌ಐಟಿ ತನಿಖೆಗೆ ಆದೇಶಿಸಿದ್ದಾರೆ. ಅವರ ವರದಿ ಆಧರಿಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದರು. ಭವಿಷ್ಯದಲ್ಲಿ ಇಂತಹ ಘಟನೆಗಳು ಮರುಕಳಿಸುವುದಿಲ್ಲ ಎಂದು ಚಂದ್ರಬಾಬು ಹೇಳಿದ್ದಾರೆ. ಆದರೆ, ತಿರುಮಲ ಲಡ್ಡು ತಯಾರಿಕೆಯಲ್ಲಿ ಕಲಬೆರಕೆ ತುಪ್ಪವನ್ನು ಬಳಸುತ್ತಿರುವ ವಿಚಾರಕ್ಕೆ ಆಧ್ಯಾತ್ಮಿಕ ಗುರು ಹಾಗೂ ಇಶಾ ಫೌಂಡೇಶನ್ ಸಂಸ್ಥಾಪಕ ಸದ್ಗುರು ವಾಸುದೇವ್ ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net