

ತಿರುಪತಿ: ಶ್ರೀ ವೆಂಕಟೇಶ್ವರ ಸ್ವಾಮಿ ದೇವಾಲಯದ ಲಡ್ಡು ಪ್ರಸಾದ(Tirupati Laddu Issue)ಕ್ಕೆ ಆಂಧ್ರ ಮಾಜಿ ಮುಖ್ಯಮಂತ್ರಿ ಜಗನ್ ಅಧಿಕಾರಾವಧಿಯಲ್ಲಿ ಹಸು, ಹಂದಿ ಕೊಬ್ಬು ಮತ್ತು ಮೀನಿನೆಣ್ಣೆ ಮಿಶ್ರಿತ ತುಪ್ಪ ಸರಬರಾಜು ಮಾಡಲಾಗಿದೆ ಎಂಬ ವರದಿ ಬಹಿರಂಗವಾದ ನಂತರ ಏರ್ಪಟ್ಟ ವಿವಾದದ ಬಗ್ಗೆ ಪ್ರತಿಕ್ರಿಯಿಸಲು ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಆಸಕ್ತಿ ತೋರಿಸಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದು ಹೇಳಿದರು.
ಲಡ್ಡು ಪ್ರಸಾದದಲ್ಲಿ ಕಲಬೆರಕೆ ಮಾಡಲಾಗಿದೆ ಎಂಬ ಆರೋಪಕ್ಕೆ ಭಕ್ತರು, ಧಾರ್ಮಿಕ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿರುವುದು ಗೊತ್ತೇ ಇದೆ. ಈ ಬಗ್ಗೆ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಚಿತ್ರರಂಗ, ರಾಜಕಾರಣಿಗಳು ಹಾಗೂ ಜನಸಾಮಾನ್ಯರು ಆಗ್ರಹಿಸುತ್ತಿದ್ದಾರೆ. ಆದರೆ ಈ ವಿವಾದದ ಬಗ್ಗೆ ಪ್ರತಿಕ್ರಿಯಿಸಲು ತಮಿಳು ಸೂಪರ್‌ಸ್ಟಾರ್ ರಜನಿಕಾಂತ್ ಆಸಕ್ತಿ ತೋರಿಸಲಿಲ್ಲ. ಈ ಬಗ್ಗೆ ಪ್ರತಿಕ್ರಿಯಿಸಲು ಬಯಸುವುದಿಲ್ಲ ಎಂದರು.
ರಜನಿಕಾಂತ್ ಸದ್ಯ 'ವೆಟ್ಟಯಾನ್' ಚಿತ್ರ ಪ್ರಚಾರದಲ್ಲಿ ತೊಡಗಿಸಿಕೊಂಡಿದ್ದಾರೆ. ಆಗ ಮಾಧ್ಯಮದವರು ''ತಿರುಪತಿ ಲಡ್ಡುವಿನಲ್ಲಿ ಕಲಬೆರಕೆ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. ಅದರ ಬಗ್ಗೆ ನಿಮ್ಮ ಅಭಿಪ್ರಾಯವೇನು? ಎಂದು ಕೇಳಿದಾಗ.. "ಸಾರಿ, ನೋ ಕಾಮೆಂಟ್ಸ್" ಎಂದು ಅಲ್ಲಿಂದ ಹೊರಟು ಹೋದರು. ಸದ್ಯ ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ.
ರಜನಿಕಾಂತ್ ಅಭಿನಯದ 'ವೆಟ್ಟಯನ್' ಚಿತ್ರ ಅ.10 ರಂದು ಬಿಡುಗಡೆಯಾಗಲಿದೆ. ಇದರಲ್ಲಿ ರಜನಿಕಾಂತ್ ಎನ್‌ಕೌಂಟರ್ ಸ್ಪೆಷಲಿಸ್ಟ್ ಆಗಿ ಕಾಣಿಸಿಕೊಳ್ಳಲಿದ್ದಾರೆ. ಅಮಿತಾಭ್, ಫಹಾದ್ ಫಾಜಿಲ್, ರಾಣಾ, ಮಂಜು ವಾರಿಯರ್, ರಿತಿಕಾ ಸಿಂಗ್, ದುಷಾರ ವಿಜಯನ್ ಪ್ರಮುಖ ಪಾತ್ರಗಳಲ್ಲಿ ನಟಿಸಿದ್ದಾರೆ.