ತಿರುಪತಿ ತಿರುಮಲ ದೇವಸ್ಥಾನಕ್ಕೆ ಭೇಟಿ ನೀಡಿದ ಕೇಂದ್ರ ಸಚಿವ ನಿತಿನ್ ಗಡ್ಕರಿ!

nithin
Published on

ತಿರುಪತಿ: ಆಂಧ್ರಪ್ರದೇಶದಲ್ಲಿರುವ ತಿರುಮಲ ತಿರುಪತಿ ದೇವಸ್ಥಾನಕ್ಕೆ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಇಂದು (ಗುರುವಾರ) ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ತಿರುಮಲದಲ್ಲಿರುವ ಪ್ರಸಿದ್ಧ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಕೇಂದ್ರ ಸಚಿವ ನಿತಿನ್ ಗಡ್ಕರಿ ಭೇಟಿ ನೀಡಿರುವ ವಿಡಿಯೋವನ್ನು ಸುದ್ದಿಸಂಸ್ಥೆ ಎಎನ್​ಐ ಸಾಮಾಜಿಕ ಜಾಲತಾಣದಲ್ಲಿ ಎಕ್ಸ್​ನಲ್ಲಿ ಪೋಸ್ಟ್ ಮಾಡಿದೆ.

ತಿರುಮಲ ತಿರುಪತಿಗೆ ಭೇಟಿ ನೀಡಿದ ಬಗ್ಗೆ ಮಾತನಾಡಿದ ಅವರು, ನಮ್ಮ ದೇಶದ ಜನರು ಸಂತೋಷ ಮತ್ತು ಸಮೃದ್ಧಿಯಾಗಿರಲು ನಾನು ದೇವರನ್ನು ಪ್ರಾರ್ಥಿಸುತ್ತೇನೆ. ದೇಶದ ಅಭಿವೃದ್ಧಿಗೆ ಕೆಲಸ ಮಾಡಲು ಸ್ಫೂರ್ತಿ, ಶಕ್ತಿ ನೀಡುವಂತೆ ದೇವರಲ್ಲಿ ಬೇಡಿಕೊಂಡಿದ್ದೇನೆ ಎಂದು ತಿಳಿಸಿದ್ದಾರೆ

ಇದಕ್ಕೂ ಮೊದಲು, ಜೂನ್ 30 ರಂದು, ಶ್ರೀಲಂಕಾದ ನ್ಯಾಯ, ಜೈಲು ವ್ಯವಹಾರಗಳು ಮತ್ತು ಸಾಂವಿಧಾನಿಕ ಸುಧಾರಣೆಗಳ ಸಚಿವ ವಿಜಯದಾಸ ರಾಜಪಕ್ಷೆ ಅವರು ತಮ್ಮ ಕುಟುಂಬದೊಂದಿಗೆ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದರು.

ಜೂನ್ 15 ರಂದು, ಕೇಂದ್ರ ಭಾರೀ ಕೈಗಾರಿಕೆಗಳು ಮತ್ತು ಉಕ್ಕು ಸಚಿವ ಎಚ್‌.ಡಿ ಕುಮಾರಸ್ವಾಮಿ ಅವರು ಆಂಧ್ರಪ್ರದೇಶದ ಶ್ರೀ ವೆಂಕಟೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆಯನ್ನು ಸಲ್ಲಿಸಿದರು. ಕೇಂದ್ರ ಸರ್ಕಾರದ ಸಚಿವರಾಗಿ ತಮ್ಮ ಕೆಲಸದಲ್ಲಿ ಯಶಸ್ವಿಯಾಗಲು ಆಶೀರ್ವಾದ ಪಡೆದರು. ಕುಮಾರಸ್ವಾಮಿ ಅವರು ಕೇಂದ್ರ ಸರ್ಕಾರದಲ್ಲಿ ತಮ್ಮ ಕೆಲಸ ಯಶಸ್ವಿಯಾಗುವ ಶಕ್ತಿ ನೀಡಲಿ ಎಂದು ವೆಂಕಟೇಶ್ವರ ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದು ಹೇಳಿದರು.

ತಿರುಪತಿ ಬಾಲಾಜಿ ದೇವಸ್ಥಾನ, ಇದು ಅತ್ಯಂತ ಪವಿತ್ರ ಸ್ಥಳಗಳಲ್ಲಿ ಒಂದಾಗಿದೆ. ಇದು ಕೇವಲ ಪೂಜಾ ಸ್ಥಳವಲ್ಲ ಆದರೆ ನಂಬಿಕೆ, ಸಂಸ್ಕೃತಿ, ಪರಂಪರೆ ಮತ್ತು ಆಧ್ಯಾತ್ಮಿಕತೆಯ ಸಂಕೇತವಾಗಿದೆ. ಹಿಂದೂ ದೇವರಾದ ವಿಷ್ಣುವಿನ ಅವತಾರವಾದ ವೆಂಕಟೇಶ್ವರನಿಗೆ ಸಮರ್ಪಿತವಾಗಿದೆ. ಈ ದೇವಾಲಯವು ಶ್ರೀಮಂತ ಇತಿಹಾಸವನ್ನು ಹೊಂದಿದೆ, ಅದ್ಭುತವಾದ ವಾಸ್ತುಶಿಲ್ಪವನ್ನು ಹೊಂದಿದೆ ಮತ್ತು ತಮ್ಮ ತೀರ್ಥಯಾತ್ರೆಯಲ್ಲಿ ದೇವಾಲಯಕ್ಕೆ ಭೇಟಿ ನೀಡುವ ಅಸಂಖ್ಯಾತ ಭಕ್ತರಿಗೆ ಆಳವಾದ ಪ್ರಾಮುಖ್ಯತೆಯನ್ನು ಹೊಂದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net