ನೇತ್ರದಾನದ ಪ್ರಮಾಣ ಸ್ವೀಕರಿಸಿದ್ರು ತಮಿಳುನಾಡು ಸಿಎಂ

EDAPPADIKPALANISAMI
Published on

ಚೆನ್ನೈ: ಮರಣಾನಂತರ ನೇತ್ರದಾನ ಮಾಡುವುದಾಗಿ ತಮಿಳುನಾಡು ಮುಖ್ಯಮಂತ್ರಿ ಕೆ.ಪಳನಿಸ್ವಾಮಿ ಸೋಮವಾರ ಪ್ರಮಾಣ ಸ್ವೀಕರಿಸಿರುವುದಾಗಿ ಸರ್ಕಾರ ತಿಳಿಸಿದೆ. ಇದೇ ಸಂದರ್ಭದಲ್ಲಿ ಅವರು ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪೋರ್ಟಲ್​ ಅನ್ನು ಲೋಕಾರ್ಪಣೆಗೊಳಿಸಿದರು.

ಮುಖ್ಯಮಂತ್ರಿ ಎಡಪ್ಪಾಡಿ ಕೆ. ಪಳನಿಸ್ವಾಮಿ ಅವರು ನೇತ್ರದಾನ ಮಾಡುವುದಾಗಿ ಪ್ರಮಾಣ ಸ್ವೀಕರಿಸಿದ್ದು, ಅದಕ್ಕೆ ಸಂಬಂಧಿಸಿದ ಪ್ರಮಾಣ ಪತ್ರವನ್ನೂ ಪಡೆದುಕೊಂಡಿದ್ದಾರೆ ಎಂದು ಆರೋಗ್ಯ ಇಲಾಖೆಯ ಪ್ರಿನ್ಸಿಪಾಲ್ ಸೆಕ್ರೆಟರಿ ಜೆ.ರಾಧಾಕೃಷ್ಣನ್ ತಿಳಿಸಿದ್ದಾರೆ.

ನೇತ್ರದಾನದ ಬಗ್ಗೆ ಬಹಳಷ್ಟು ಜನರಿಗೆ ಮಾಹಿತಿ ಇಲ್ಲ. ಅದನ್ನು ಈ ಪೋರ್ಟಲ್ ನೀಡುತ್ತದೆ. ಜನರಲ್ಲಿ ಜಾಗೃತಿ ಮೂಡಿಸಿ ನೇತ್ರದಾನಕ್ಕೆ ಪ್ರಮಾಣ ಸ್ವೀಕರಿಸುವಂತೆ ಮಾಡುವಲ್ಲಿ ಇದು ಮಹತ್ವದ ಹೆಜ್ಜೆಯಾಗಿರುತ್ತದೆ. ನೇತ್ರದಾನಿಗಳ ಒಂದು ರಿಜಿಸ್ಟರ್ ಸಿದ್ಧಪಡಿಸಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net