ಹಾವೇರಿ: ಬೈಕ್ಗೆ ಮತ್ತೊಂದು ಬೈಕ್ ಡಿಕ್ಕಿಯಾಗಿ ಓರ್ವ ಯುವಕ ಮೃತಪಟ್ಟ ಟನೆ ನಗರದ ಗುತ್ತಲ ರಸ್ತೆಯಲ್ಲಿ ಭಾನುವಾರ ಸಂಭವಿಸಿದೆ.
ತಾಲೂಕಿನ ಯತ್ತಿನಹಳ್ಳಿ ನಿವಾಸಿ ಸುಭಾಸ ಮಲ್ಲಪ್ಪ ಹರಿಜನ (19) ಮೃತ ಯುವಕ.
ಇವರು ಬೈಕ್ ಮೇಲೆ ಹಾವೇರಿಯಿಂದ ಗುತ್ತಲಕ್ಕೆ ತೆರಳುತ್ತಿದ್ದ ಸಮಯದಲ್ಲಿ ಮತ್ತೊಂದು ಬೈಕ್ಗೆ ಡಿಕ್ಕಿ ಹೊಡೆದಿದ್ದಾನೆ. ಇದರಿಂದ ಕೆಳಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಸುಭಾಸನನ್ನು ಚಿಕಿತ್ಸೆಗಾಗಿ ಹುಬ್ಬಳ್ಳಿ ಕಿಮ್ಸ್ಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆಗೆ ಸ್ಪಂದಿಸದೆ ಮೃತಪಟ್ಟಿದ್ದಾನೆ ಎನ್ನಲಾಗಿದೆ. ಈ ಕುರಿತು ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.