ಶಿವಮೊಗ್ಗಕ್ಕೆ ಬಿಜೆಪಿ ಸತ್ಯಶೋಧನಾ ಸಮಿತಿ

SHIVAMOGGA MILK download
Published on

ಬೆಂಗಳೂರು: ರಾಗಿಗುಡ್ಡದಲ್ಲಿ ನಡೆದ ಘಟನೆಯ ಬಗ್ಗೆ ಪರಿಶೀಲನೆ ಮಾಡಲು ಬಿಜೆಪಿ ಅಧ್ಯಕ್ಷರ ನೇತೃತ್ವದ ಸತ್ಯಶೋದನಾ ಸಮಿತಿ ಅ.5ರಂದು ಶಿವಮೊಗ್ಗಕ್ಕೆ ಭೇಟಿ ನೀಡಲಿದೆ.

ಮಾಜಿ ಉಪಮುಖ್ಯಮಂತ್ರಿಗಳಾದ ಸಚಿವ ಕೆ.ಎಸ್.ಈಶ್ವರಪ್ಪ, ಡಾ.ಸಿ.ಎನ್.ಅಶ್ವತ್ಥನಾರಾಯಣ, ಮಾಜಿ ಸಚಿವರಾದ ಅರಗ ಜ್ಞಾನೇಂದ್ರ, ಸಂಸದ ಬಿ.ವೈ.ರಾಘವೇಂದ್ರ, ಶಾಸಕ ಚನ್ನಬಸಪ್ಪ, ವಿಧಾನ ಪರಿಷತ್ ಸದಸ್ಯರುಗಳಾದ ಎನ್.ರವಿಕುಮಾರ್, ಎಸ್.ರುದ್ರೇಗೌಡ, ಡಿ.ಎಸ್.ಅರುಣ್, ಭಾರತಿ ಶೆಟ್ಟಿ ಅವರು ನಿಯೋಗದಲ್ಲಿರುತ್ತಾರೆ ಎಂದು ಬಿಜೆಪಿ ಪ್ರಕಟಣೆ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net