

ಬೆಂಗಳೂರು:
ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಕರ್ನಾಟಕ ಅರಣ್ಯ ಅಭಿವೃದ್ಧಿ ನಿಗಮ ನಿಯಮಿತದ ವತಿಯಿಂದ 2 ಕೋಟಿ ರೂ ಚೆಕ್ ಅನ್ನು ಸಿಎಂ ಸಿದ್ದರಾಮಯ್ಯ ಅವರಿಗೆ ಸಮರ್ಪಿಸಿದರು.
2020-21 ರಲ್ಲಿ 5 ಕೋಟಿ ರೂಪಾಯಿ ನಷ್ಟ ಅನುಭವಿಸಿದ್ದ ನಿಗಮ, 2021-22 ರಲ್ಲಿ 3 ಕೋಟಿ ಹಾಗೂ 22-23ರಲ್ಲಿ 19.5 ಕೋಟಿ ಲಾಭ ಮಾಡಿದೆ ಎಂದು ಇದೇ ಸಂದರ್ಭದಲ್ಲಿ ಸಚಿವ ಖಂಡ್ರೆ ಅವರು ಮುಖ್ಯಮಂತ್ರಿಗಳಿಗೆ ಮಾಹಿತಿ ನೀಡಿದರು.