

ಬೇಲೂರು: ಜಿಲ್ಲಾಧಿಕಾರಿ ನಿರ್ದೇಶನದಂತೆ ಜಿಲ್ಲೆಯ ಎಲ್ಲ ಶಿಕ್ಷಣ ಸಂಸ್ಥೆಗಳನ್ನು ತಂಬಾಕು ಮುಕ್ತವಾಗಿಸಲು ಹಾಗೂ ನಿಯಮ ಬಾಹಿರವಾಗಿ ತಂಬಾಕು ಉತ್ಪನ್ನಗಳ ಬಳಕೆ ತಡೆಗಟ್ಟುವ ಉದ್ದೇಶದಿಂದ ತಂಬಾಕು ನಿಯಂತ್ರಣ ಕೋಶದಿಂದ ಬೇಲೂರಿನಲ್ಲಿ ಇತ್ತೀಚೆಗೆ ಜಾಗೃತಿ ಕಾರ್ಯಕ್ರಮ ನಡೆಯಿತು.
ಜಿಲ್ಲಾ ತಂಬಾಕು ನಿಯಂತ್ರಣ ಕೋಶ, ತಾಲೂಕು ಕ್ಷೇತ್ರ ಶಿಕ್ಷಣಾಧಿಕಾರಿ, ತಾಲೂಕು ಆರೋಗ್ಯಾಧಿಕಾರಿ ಕಚೇರಿ, ಪೊಲೀಸ್ ಇಲಾಖೆ ಸಹಯೋಗದಲ್ಲಿ ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಶಿವಶಂಕರ್ ಮಾರ್ಗದರ್ಶನದಲ್ಲಿ ತಾಲೂಕು ಆರೋಗ್ಯಾಧಿಕಾರಿ ಡಾ.ವಿಜಯ್ ಅವರ ನೇತೃತ್ವದಲ್ಲಿ ಜಾಗೃತಿ ಅಭಿಯಾನದ ಮೂಲಕ ಕರ ಪತ್ರಗಳನ್ನು ವಿತರಿಸಿ ಅರಿವು ಮೂಡಿಸಲಾಯಿತು. ನಿಯಮ ಬಾಹಿರವಾಗಿ ಮಾರಾಟ ಮಾಡುತ್ತಿದ್ದ ಅಂಗಡಿ ಮುಂಗಟ್ಟುಗಳ ಮೇಲೆ ದಾಳಿ ನಡೆಸಿ 32 ಪ್ರಕರಣ ದಾಖಲಿಸಿ, 1600 ರೂ. ದಂಡ ವಿಧಿಸಲಾಯಿತು.