

ಬೆಂಗಳೂರು: ಕನ್ನಡ ಚಿತ್ರರಂಗದ ಪ್ರತಿಭಾವಂತ ನಟ, ಬರಹಗಾರ, ನಿರ್ದೇಶಕ ರಾಜ್ ಬಿ.ಶೆಟ್ಟಿ ನಟನೆಯ ಬಹುನಿರೀಕ್ಷಿತ 'ಟೋಬಿ' ಚಿತ್ರದ ಟ್ರೇಲರ್ ಬಿಡುಗಡೆ ದಿನಾಂಕ ಮತ್ತು ಸಮಯವನ್ನು ಇದೀಗ ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.
ರಾಜ್ ಬಿ.ಶೆಟ್ಟಿ ಅಭಿಮಾನಿಗಳು ಬೆಂಬಿಡದೆ ಕೇಳುತ್ತಿದ್ದ ಪ್ರಶ್ನೆಗೆ ಇದೀಗ ಚಿತ್ರತಂಡ ಉತ್ತರಿಸಿದ್ದು, "ಟೋಬಿ ಚಿತ್ರದ ಟ್ರೇಲರ್ ಇದೇ ಆಗಸ್ಟ್ 04 ರಂದು ಸಂಜೆ 4:15ಕ್ಕೆ ಬಿಡುಗಡೆಗೊಳಿಸಲಿದ್ದೇವೆ. ಆರ್ ಯು ರೆಡಿ" ಎಂದು ಪೋಸ್ಟರ್ನಲ್ಲಿ ಪ್ರಶ್ನಾರ್ಥಕ ಚಿಹ್ನೆ ಬಳಸಿ ತಿಳಿಸಿದೆ. ಸದ್ಯ ಈ ಬಗ್ಗೆ ಫ್ಯಾನ್ಸ್ ಸಂತಸ ವ್ಯಕ್ತಪಡಿಸಿದ್ದು, ಟ್ರೇಲರ್ ವೀಕ್ಷಿಸಿದ ಬಳಿಕ ಏನು ಹೇಳಲಿದ್ದಾರೆ ಎಂಬುದನ್ನು ಕಾದು ನೋಡಬೇಕಿದೆ.