10 ಗ್ರಾಂ ಚಿನ್ನದ ಬೆಲೆ 98,100 ರೂ.! ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನ-ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ಮಾಹಿತಿ | Gold Rates

ವಿಜಯವಾಣಿ (31)
Published on

Gold Rates: ಕಳೆದ ಒಂದು ವಾರದಿಂದ ಷೇರು ಪೇಟೆಯ ಏರುಪೇರಿನಿಂದ ಚಿನ್ನದ ದರದಲ್ಲಿ ಗಣನೀಯವಾಗಿ 300ರಿಂದ 900 ರೂ. ರವರೆಗೂ ಹೆಚ್ಚಳ ಕಂಡುಬಂದಿದೆ. ಇದು ಚಿನ್ನ ಖರೀದಿದಾರರನ್ನು ಅಕ್ಷರಶಃ ಚಿಂತೆಗೆ ದೂಡಿದೆ. ಇನ್ನೇನು ಮದುವೆ, ಶುಭಕಾರ್ಯಗಳ ಸೀಸನ್​ ಶುರುವಾಗುವ ಸಮಯ ಹತ್ತಿರವಾಗುತ್ತಿದ್ದಂತೆಯೇ ಇತ್ತ ಚಿನ್ನದ ದರಗಳು ಗಗನಕ್ಕೇರುತ್ತಿವೆ. ಪ್ರಸ್ತುತ ವರದಿಗಳ ಪ್ರಕಾರ, ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಆಗಿದ್ದು, 10 ಗ್ರಾಂ ಚಿನ್ನದ ಬೆಲೆ ಈಗ 98,100 ರೂ. ಆಗಿದೆ. ಈ ಸಂಗತಿ 'ಚಿನ್ನ'ದ ಗ್ರಾಹಕರನ್ನು ಕಂಗಾಲಾಗಿಸಿದೆ.

ದೇಶದ ಪ್ರಮುಖ ನಗರಗಳಲ್ಲಿ ಇಂದಿನ ಚಿನ್ನದ ಬೆಲೆ

  • ರಾಷ್ಟ್ರ ರಾಜಧಾನಿಯಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 89,350 ರೂ. ಆಗಿದ್ದರೆ, 24 ಕ್ಯಾರೆಟ್‌ನ ಬೆಲೆ 97,460 ರೂ. ತಲುಪಿದೆ.
  • ಮುಂಬೈ, ಬೆಂಗಳೂರು ಮತ್ತು ಚೆನ್ನೈ ನಗರಗಳಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 89,200 ರೂ. ಆಗಿದ್ದರೆ, 24 ಕ್ಯಾರೆಟ್ ಬೆಲೆ 97,310 ರೂ. ಆಗಿದೆ.
  • ಇನ್ನು ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ, 22 ಕ್ಯಾರೆಟ್‌ನ 10 ಗ್ರಾಂ ಚಿನ್ನದ ಬೆಲೆ 89,200 ರೂ. ಆಗಿದ್ದರೆ, 24 ಕ್ಯಾರೆಟ್‌ನ ಬೆಲೆ 97,310 ರೂ.ಗೆ ತಲುಪಿದೆ.

ಬೆಳ್ಳಿ ಬೆಲೆ ಸ್ಥಿರ

  • ದೆಹಲಿ, ಮುಂಬೈ ಮತ್ತು ಬೆಂಗಳೂರಿನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,00,000 ರೂ. ದಾಖಲಾಗಿದೆ.
  • ಚೆನ್ನೈನಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,10,000 ರೂ. ಇದೆ.
  • ಇನ್ನು ಹೈದರಾಬಾದ್, ವಿಜಯವಾಡ ಮತ್ತು ವಿಶಾಖಪಟ್ಟಣದಲ್ಲಿ ಇಂದು ಬೆಳ್ಳಿ ಬೆಲೆ ಸ್ವಲ್ಪ ಏರಿಕೆ ಕಂಡಿದೆ. ಈ ಮೂಲಕ ಆಯಾ ನಗರಗಳಲ್ಲಿ ಒಂದು ಕೆಜಿ ಬೆಳ್ಳಿಯ ಬೆಲೆ 1,10,000 ರೂ. ತಲುಪಿದೆ.

ನಿಮ್ಮ ಗಮನಕ್ಕೆ: ಮೇಲೆ ತಿಳಿಸಲಾದ ದರ ಇಂದು ಬೆಳಗ್ಗೆ 10 ಗಂಟೆಯವರೆಗೆ ದಾಖಲಾದ ಮಾಹಿತಿ. ಚಿನ್ನ-ಬೆಳ್ಳಿ ಬೆಲೆಗಳು ದಿನಕ್ಕೆ ಹಲವು ಬಾರಿ ಏರುಪೇರು ಆಗುತ್ತಿರುತ್ತವೆ. ನಿಖರವಾದ ಬೆಲೆಗಳಿಗಾಗಿ, ನಿಮ್ಮ ಹತ್ತಿರದ ಆಭರಣ ಮಳಿಗೆ ಅಥವಾ ಅಧಿಕೃತ ವೆಬ್​ಸೈಟ್​ ದರ ಪರಿಶೀಲಿಸಿ,(ಏಜೆನ್ಸೀಸ್).

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net