

Rain : ಕಳೆದ ಎರಡು ಮುರು ದಿನಗಳಿಂದ ಕೊಂಚ ಬಿಡುವು ಪಡೆದಿದ್ದ ಮಳೆ ಇದೀಗ ಮತ್ತೆ ಹೆಚ್ಚಾಗಲಿದೆ ಎನ್ನುವ ಮುನ್ಸೂಚನೆ ದೊರೆತಿದೆ. ಕರ್ನಾಟಕದ 20ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಈ ಬಾರಿ ಅವಧಿಗೂ ಮುನ್ನವೇ ರಾಜ್ಯಕ್ಕೆ ಮುಂಗಾರು ಪ್ರವೇಶವಾಗಿದ್ದು, ರೈತರ ಮುಖದಲ್ಲಿ ಸಂತಸ ಮೂಡಿಸಿದೆ. ರಾಜ್ಯದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗಲಿದ್ದು, ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಹಲವು ಜಿಲ್ಲೆಗಳಿಗೆ ಮಳೆಯ ಅಲರ್ಟ್ ನೀಡಲಾಗಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಕೊಡಗು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಬೆಳಗಾವಿ, ಬೀದರ್, ಧಾರವಾಡ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿಯಲ್ಲಿ ಮಳೆಯಾಗಲಿದೆ.
ಇತ್ತ ಬೆಂಗಳೂರು ನಗರ ಹಾಗೂ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು ಜಿಲ್ಲೆಯಲ್ಲಿ ಸಾಧಾರಣ ಮಳೆ ಸುರಿಯುವ ಮುನ್ನೆಚ್ಚರಿಕೆ ನೀಡಲಾಗಿದೆ.
ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಕೂಡ ಮಳೆಯಾಗಲಿದೆ. ಉಪ್ಪಿನಂಗಡಿ, ಗೋಕರ್ಣ, ಸಿದ್ದಾಪುರ, ಮಾಣಿ, ಭಾಗಮಂಡಲ, ಕೊಟ್ಟಿಗೆಹಾರ, ತ್ಯಾಗರ್ತಿ, ಜಯಪುರ, ಗೇರುಸೊಪ್ಪ, ಮುಲ್ಕಿ, ಕುಮಟಾ, ಮಂಗಳೂರು, ಬಂಟವಾಳ, ಕ್ಯಾಸಲ್ರಾಕ್, ಮೂಡುಬಿದಿರೆ, ಬಂಟವಾಳ, ಹೊನ್ನಾವರ, ಬೆಳ್ತಂಗಡಿ, ಆಗುಂಬೆ, ರಾಯಲ್ಪಾಡು, ಶೃಂಗೇರಿ, ಕಮ್ಮರಡಿ, ನಾಪೋಕ್ಲು, ಅಜ್ಜಂಪುರ, ಸೋಮವಾರಪೇಟೆ, ತರೀಕೆರೆಯಲ್ಲಿ ಮಳೆಯಾಗಿದೆ.