

ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಳ್ಳಲಿದ್ದು, ಮುಂದಿನ ಐದು ದಿನ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಇಂದು ಸೂಚನೆ ನೀಡಿದೆ.
ರಾಜ್ಯಾದ್ಯಂತ ಇಂದಿನಿಂದ ಮುಂಗಾರು ಮಳೆ ಚುರುಕಾಗುವ ಸಾಧ್ಯತೆ ಹೆಚ್ಚಿದ್ದು, ಮುಂದಿನ ಐದು ದಿನಗಳ ಕಾಲ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಲಿದೆ ಎಂದು ವರದಿ ಉಲ್ಲೇಖಿಸಿದೆ. ಮೊದಲ ಮೂರು ದಿನ ಯಲ್ಲೊ ಮತ್ತು ಕಡೆಯ ಎರಡು ದಿನ ಆರೆಂಜ್ ಅಲರ್ಟ್ ಘೋಷಣೆಯಾಗಿದೆ. ಸದ್ಯ ರಾಜ್ಯ ರಾಜಧಾನಿಯಲ್ಲಿ ಎಂದಿನಂತೆ ಮೋಡ ಕವಿದ ವಾತಾವರಣ ಮುಂದುವರೆಯಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ವರದಿಯಲ್ಲಿ ತಿಳಿಸಿದೆ.