

ಬನ್ನೂರು: ವಿಶ್ವಕರ್ಮ ಜನಾಂಗದ ಪ್ರತಿಯೊಬ್ಬರೂ ಒಗ್ಗಟ್ಟಾದಲ್ಲಿ ಸಮಸ್ಯೆಗಳನ್ನು ಸರ್ಕಾರದ ಮಟ್ಟದಲ್ಲಿ ಗಮನಕ್ಕೆ ತಂದು ಬಗೆಹರಿಸಿಕೊಳ್ಳಲು ಸಹಕಾರಿಯಾಗುತ್ತದೆ ಎಂದು ಶ್ರೀ ವಿಶ್ವಕರ್ಮ ಕ್ಷೇಮಾಭಿವೃದ್ಧಿ ಸಂಘದ ಗೌರವಾಧ್ಯಕ್ಷ ಪಿ.ಪ್ರಭಾಕರ್ ತಿಳಿಸಿದರು.
ಪಟ್ಟಣ ಸಮೀಪದ ಕರಿಯಪ್ಪ ಸ್ವಾಮಿ ದೇವಾಲಯದಲ್ಲಿ ಶ್ರೀ ವಿಶ್ವಕರ್ಮ ಕ್ಷೇಮಾಭಿವೃದ್ದಿ ಸಂಘದಿಂದ ಭಾನುವಾರ ಹಮ್ಮಿಕೊಂಡಿದ್ದ ವಿಶ್ವಕರ್ಮ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು.
ಸಮಾಜದಲ್ಲಿ ವಿಶ್ವಕರ್ಮ ಜನಾಂಗದ ಪಾತ್ರ ಪ್ರಮುಖವಾಗಿದ್ದು, ಎಲ್ಲರೂ ಒಗ್ಗಟ್ಟಿನಿಂದ ಮುನ್ನಡೆಯಬೇಕು ಎಂದು ಹೇಳಿದರು. ಗೌರವಾಧ್ಯಕ್ಷ ಎ.ಎನ್.ಸ್ವಾಮಿ ಮಾತನಾಡಿ, ಸಂಘವನ್ನು ಉತ್ತಮ ರೀತಿಯಲ್ಲಿ ಬೆಳೆಸಿಕೊಂಡು ಹೋಗಲು ಪ್ರತಿಯೊಬ್ಬರೂ ಸಹಕರಿಸಬೇಕು. ಸಮುದಾಯದ ಏಳಿಗೆಯ ಬಗ್ಗೆ ಪ್ರತಿಯೊಬ್ಬರೂ ಚಿಂತನೆ ಹರಿಸಬೇಕು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಗೌರವಾಧ್ಯಕ್ಷ ಎ.ಎನ್.ಸ್ವಾಮಿ, ಪಿ.ಪ್ರಭಾಕರ್, ನಾಗರಾಜಚಾರ್, ನಾಗರತ್ನ ಪ್ರಭಾಕರ್, ಗೀತಾ, ಸಿದ್ದಪ್ಪಾಜಿ ಅವರನ್ನು ಸನ್ಮಾನಿಸಲಾಯಿತು.
ವೇದಿಕೆ ಕಾರ್ಯಕ್ರಮಕ್ಕೂ ಮೊದಲು ವಿವಿಧ ಸ್ತಬ್ಧಚಿತ್ರಗಳೊಂದಿಗೆ ಶ್ರೀ ವಿಶ್ವಕರ್ಮ ಭಾವಚಿತ್ರವನ್ನು ಅಲಂಕೃತವಾಹನದಲ್ಲಿರಿಸಿ ಪಟ್ಟಣದ ಪ್ರಮುಖ ರಸ್ತೆಯಲ್ಲಿ ಮೆರವಣಿಗೆ ಮಾಡಲಾಯಿತು. ಕುಮಾರ್, ವಿಜೇಂದ್ರ, ಶಿವಕುಮಾರ್, ಸಿದ್ದಪ್ಪಾಜಿ, ಶಿಲ್ಪಿ ರಮೇಶ್, ಅಭಿ, ಯೋಗಿ, ಮಹೇಶ್, ಅಮರ್, ಸಂತೋಷ್, ರಘು, ಗೋಪಾಲಾಚಾರ್ ಇತರರು ಇದ್ದರು.