

ರಾಮನಗರ: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಟೋಲ್ ದರ ಮತ್ತೆ ಏರಿಕೆಗೊಂಡಿದೆ. ಶನಿವಾರದಿಂದ ಪರಿಷ್ಕೃತ ದರ ಅನ್ವಯವಾಗಲಿದ್ದು ದಶಪಥ ಹೆದ್ದಾರಿ ಸಂಚಾರ ಮತ್ತಷ್ಟು ದುಬಾರಿ ಆಗಲಿದೆ. ಈ ಕುರಿತಾಗಿ ರಾಮನಗರದಲ್ಲಿ ಜೆಡಿಎಸ್ ಯುವನಾಯಕ ನಿಖಿಲ್ ಕುಮಾರಸ್ವಾಮಿ ಅವರು ಬಿಜೆಪಿ ಸರ್ಕಾರ ವಿರುದ್ಧವಾಗಿ ವಾಗ್ದಾಳಿ ಮಾಡಿದ್ದಾರೆ.
- ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣ
ರಾಮನಗರದಲ್ಲಿ ಮಾತನಾಡಿದ ಅವರು, 17 ದಿನದ ನಂತರ ಮತ್ತೆ ಟೋಲ್ ದರ ಹೆಚ್ಚಳವಾಗಿದೆ. ಕೇಂದ್ರ - ರಾಜ್ಯ ಡಬಲ್ ಇಂಜಿನ್ ಸರ್ಕಾರದಲ್ಲಿ ಬಡವರಿಗೆ ಈ ರಸ್ತೆ ಇಲ್ಲ. ಅವರು ಉದ್ದಟತನದಿಂದ ಹೆಚ್ಚಳ ಮಾಡಿದ್ದಾರೆ. ಮೊದಲು ಸರ್ವಿಸ್ ರಸ್ತೆಗಳನ್ನ ಸರಿಮಾಡಲಿ. ಹಿಂದೆಯೂ ಹೋರಾಟ ಮಾಡಿದ್ದೇವೆ, ಮುಂದೆಯೂ ಹೋರಾಟ ಮಾಡುತ್ತೇವೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ ಬರಲು ಕಾಂಗ್ರೆಸ್ ಕಾರಣವಾಗಿದೆ. ನಾವು ಯಾರ ಜೊತೆಯಲ್ಲಿಯೂ ಹೊಂದಾಣಿಕೆ ಆಗಿಲ್ಲ. ನಾವು ಸ್ಪಷ್ಟ ಬಹುಮತದಿಂದ ಸರ್ಕಾರ ಮಾಡುತ್ತೇವೆಂದು ತಿಳಿಸಿದ್ದಾರೆ.
ಹಾಸನ ಟಿಕೆಟ್ ವಿಚಾರವಾಗಿ ಗೊಂದಲ ವಿಚಾರವಾಗಿ ಮಾತನಾಡಿ, ಇವತ್ತು ಹಾಸನದ ಶಾಸಕರು ತಿಂಡಿಗೆ ಬಂದಿದ್ದರು. ಕುಮಾರಣ್ಣ ಅವರನ್ನ ಕರೆಸಿದ್ದರು, ಅಲ್ಲಿ ಏನಾಗಿದೆ ಗೊತ್ತಿಲ್ಲ. ನಾನು ಬೆಳಗ್ಗೆಯೇ ರಾಮನಗರಕ್ಕೆ ಬಂದಿದ್ದೇನೆ. ಮುಂದೆ ಅವರೇ ಈ ವಿಚಾರವಾಗಿ ತಿಳಿಸುತ್ತಾರೆಂದು ಹೇಳಿದ್ದಾರೆ.
ಇದನ್ನೂ ಓದಿ: ಎಸ್ಎಸ್ಎಲ್ಸಿ ಕನ್ನಡ ಪ್ರಶ್ನೆ ಪತ್ರಿಕೆ ಸೋರಿಕೆ!