ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತ; ಸ್ವಲ್ಪದರಲ್ಲೇ ಪಾರಾದ ನಟ| Vijay Devarakonda

Untitled design - 2025-10-06T212303.713
Published on

Vijay Devarakonda: ತೆಲಂಗಾಣದ ಗದ್ವಾಲ್ ಜಿಲ್ಲೆಯ ಉಂಡವೆಲ್ಲಿ ರಾಷ್ಟ್ರೀಯ ಹೆದ್ದಾರಿಲ 44ರಲ್ಲಿ ಟಾಲಿವುಡ್ ನಟ ವಿಜಯ್ ದೇವರಕೊಂಡ ಕಾರು ಅಪಘಾತವಾಗಿದ್ದು, ನಟ ಸ್ವಲ್ಪದರಲ್ಲೇ ಪಾರಾಗಿದ್ದು, ಸುರಕ್ಷಿತವಾಗಿದ್ದಾರೆ ಎಂದು ಸೋಮವಾರ(ಅ. 06) ವರದಿಯಾಗಿದೆ.

ಪುಟ್ಟಪರ್ತಿಯಿಂದ ವಿಜಯ್ ತನ್ನ ಕಾರಿನಲ್ಲಿ ಹೈದರಾಬಾದ್ ಕಡೆಗೆ ಪ್ರಯಾಣಿಸುತ್ತಿದ್ದಾಗ, ಮತ್ತೊಂದು ಕಾರು ಅವರನ್ನು ಓವರ್ ಟೇಕ್ ಮಾಡುವ ಪ್ರಕ್ರಿಯೆಯಲ್ಲಿ ಡಿಕ್ಕಿ ಹೊಡೆದಿದೆ. ಇದರಿಂದ ವಿಜಯ್ ಅವರ ಕಾರು ಭಾಗಶಃ ಹಾನಿಗೊಳಗಾಗಿದೆ. ಆದಾಗ್ಯೂ, ವಿಜಯ್ ಗಾಯಗೊಂಡಿಲ್ಲ ಮತ್ತು ಅವರು ಸುರಕ್ಷಿತವಾಗಿದ್ದಾರೆ ಎನ್ನಲಾಗಿದೆ.

ಅಪಘಾತದ ನಂತರ ವಿಜಯ್ ದೇವರಕೊಂಡ ಮತ್ತೊಂದು ಕಾರಿನಲ್ಲಿ ತೆರಳಿದ್ದಾರೆ. ಘಟನೆ ಬಗ್ಗೆ ವಿಜಯ್ ಅವರ ಕಾರು ಚಾಲಕ ಉಂಡವೆಲ್ಲಿ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದು, ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net