

ಹೈದ್ರಾಬಾದ್: ಟಾಲಿವುಡ್ ( Tollywood News ) ನಟ ರಾಜೇಂದ್ರ ಪ್ರಸಾದ್ (Rajendra Prasad) ಅವರ ಪುತ್ರಿ ಗಾಯತ್ರಿ (38) ಹೃದಯಾಘಾತದಿಂದ ನಿಧನರಾಗಿದ್ದಾರೆ.
ಹೈದರಾಬಾದ್‌ನ ಎಐಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯತ್ರಿ ಅವರು ಕೊನೆಯುಸಿರೆಳೆದಿದ್ದಾರೆ. ರಾಜೇಂದ್ರ ಪ್ರಸಾದ್ ಅವರಿಗೆ ಒಬ್ಬ ಪುತ್ರಿ ಹಾಗೂ ಪುತ್ರ ಇದ್ದಾರೆ.
ರಾಜೇಂದ್ರ ಪ್ರಸಾದ್ ಅವರ ಪುತ್ರಿ ಗಾಯತ್ರಿ ಅವರು 38 ನೇ ವಯಸ್ಸಿನಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಶುಕ್ರವಾರ ಹೃದಯಾಘಾತವಾದ ಕಾರಣ ಆಕೆಯನ್ನು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಕೊನೆಯುಸಿರೆಳೆದಿದ್ದಾರೆ.
ಗಾಯತ್ರಿ ಅವರ ಅಂತಿಮ ಸಂಸ್ಕಾರ ಭಾನುವಾರ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ. ರಾಜೇಂದ್ರ ಪ್ರಸಾದ್ ಪುತ್ರಿ ನಿಧನಕ್ಕೆ ಚಿತ್ರರಂಗದ ಗಣ್ಯರು ಸಂತಾಪ ಸೂಚಿಸಿದ್ದಾರೆ. ಆಕೆಯ ಸಾವಿನ ಬಗ್ಗೆ ಹೆಚ್ಚಿನ ವಿವರಗಳು ಇನ್ನಷ್ಟೇ ತಿಳಿಯಬೇಕಿದೆ.
ವರದಿಗಳ ಪ್ರಕಾರ ಗಾಯತ್ರಿಗೆ ಗ್ಯಾಸ್ಟ್ರಿಕ್ ತೊಂದರೆ ಕಾಣಿಸಿಕೊಂಡಿದ್ದು, ಅವರನ್ನು ಹೈದರಾಬಾದ್‌ನ ಎಐಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಧ್ಯರಾತ್ರಿ 12:40ರ ಸುಮಾರಿಗೆ ಆಕೆಗೆ ತೀವ್ರ ಹೃದಯಾಘಾತವಾಗಿದ್ದು, ವೈದ್ಯರಿಗೆ ಆಕೆಯ ಜೀವ ಉಳಿಸಲು ಸಾಧ್ಯವಾಗಲಿಲ್ಲ ಎಂದು ವರದಿ ಹೇಳಿದೆ.