ನಾಳೆಯೂ ದಕ್ಷಿಣ ಒಳನಾಡಿನಲ್ಲಿ ಯೆಲ್ಲೋ ಅಲರ್ಟ್; ಇಂದು ದಿನವಿಡೀ ಜಿಟಿಜಿಟಿ ಮಳೆ

Lead Rain
Published on

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಚಂಡಮಾರುತ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಗುರುವಾರ ದಿನವಿಡೀ ಜಿಟಿಜಿಟಿ ಮಳೆಯಾಗಿದೆ. ಇದರಿಂದ ಜನಜೀವನ ಅಸ್ತವ್ಯಸ್ತವಾಗಿತು.

ಮುಂಜಾನೆ ಆರಂಭವಾದ ಜಿಟಿ ಜಿಟಿ ಮಳೆ ರಾತ್ರಿವರೆಗೂ ಮುಂದುವರಿಯಿತು. ಸ್ವಲ್ಪ ಹೊತ್ತು ಜೋರಾಗಿ ಬಂದರೆ, ಬಿಡುವಿನ ಸಂದರ್ಭದಲ್ಲಿ ಸೋನೆ ಮಳೆಯ ರೀತಿಯಲ್ಲಿ ಹನಿಯುತ್ತಲೇ ಇತ್ತು. ಬೆಳಗ್ಗೆಯಿಂದಲೇ ಮಳೆ ಸುರಿಯುತ್ತಿರುವುದರಿಂದ ಕೆಲಸಕ್ಕೆ ಹೋಗುವ ಉದ್ಯೋಗಿಗಳಿಗೆ ಸ್ವಲ್ಪ ತೊಂದರೆಯಾಯಿತು. ಅಲ್ಲದೆ, ಇಡೀ ದಿನ ಶೀತ ಹವೆ ಜನರನ್ನು ಕಾಡಿತು.

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮೈಸೂರು, ಹಾಸನ, ಮಂಡ್ಯ, ಕೋಲಾರ, ರಾಮನಗರ ಮತ್ತು ತುಮಕೂರು ಸೇರಿ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇತ್ತು. ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾದರೆ ಇನ್ನುಳಿದ ಜಿಲ್ಲೆಗಳಲ್ಲಿ ತುಂತುರು ಮಳೆಯಾಯಿತು.

ಯೆಲ್ಲೋ ಅಲರ್ಟ್ ಮುಂದುವರಿಕೆ: ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ನ.27ರಂದು ಯೆಲ್ಲೋ ಅಲರ್ಟ್ ಮುಂದುವರಿದರೆ ಕರಾವಳಿ ಹಾಗೂ ಉತ್ತರ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಹಗುರದಿಂದ ಕೂಡಿದ ಸಾಧಾರಣ ಮಳೆಯಾಗಲಿದೆ. ರಾಜ್ಯದಲ್ಲಿ ನ.28ರ ಬಳಿಕ ಮಳೆ ಇಳಿಕೆಯಾಗಲಿದೆ ಎಂದು ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net