ನಾಳೆ ಶ್ರೀ ಮಹೇಶ್ವರಿ ಕಾಳಮ್ಮ ಜಾತ್ರಾ ಮಹೋತ್ಸವ

25 SARAGv 5
Published on

  • ಸರಗೂರು : ತಾಲೂಕಿನ ಹೆಗ್ಗನೂರು ಗ್ರಾಮದಲ್ಲಿ ಮಾ.27 ರಂದು ಶ್ರೀ ಮಹೇಶ್ವರಿ ಕಾಳಮ್ಮ ಜಾತ್ರಾ ಮಹೋತ್ಸವ ನಡೆಯಲಿದ್ದು, ಜಾತ್ರೆಯ ಆಚರಣೆಗೆ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಪ್ರತಿ ವರ್ಷದಂತೆ ಈ ವರ್ಷವೂ ಅನೇಕ ಧಾರ್ಮಿಕ ವಿಧಿ ವಿಧಾನಗಳೊಂದಿಗೆ ಜಾತ್ರೆ ಆಚರಿಸಲಾಗುತ್ತಿದ್ದು, ದೇವಸ್ಥಾನಕ್ಕೆ ಸುಣ್ಣ, ಬಣ್ಣ ಬಳಿದು ಪೂರ್ವ ಸಿದ್ಧತೆ ಮಾಡಕೊಳ್ಳಲಾಗಿದೆ.

  • ಜಾತ್ರೆಯ ದಿನ ವಿಶೇಷ ಹೋಮ, ಮುಂಜಾನೆ 5 ಗಂಟೆಗೆ ಸುಪ್ರಭಾತ ಸೇವೆ, ವಿಶೇಷ ಪಂಚಾಮೃತ ಅಭಿಷೇಕ ನಡೆಯಲಿದೆ. ಮಾ.27ರಂದು ಭಕ್ತರು ಉರುಳು ಸೇವೆ ಮಾಡಿ, ಕ್ಷೇತ್ರದ ಈಶಾನ್ಯ ದಿಕ್ಕಿನಲ್ಲಿರುವ ಹೆಬ್ಬಳದ ತೊರೆಯಿಂದ ಗಂಗಾ ಪೂಜೆ ಮಾಡಿ ನಂತರ ಬಾಯಿಬೀಗ ಹರಕೆ ಸೇರಿದಂತೆ ವಿವಿಧ ಸೇವೆಗಳನ್ನು ಸಲ್ಲಿಸುತ್ತಾರೆ. ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಯಲಿದೆ.

  • ಜಾತ್ರಾ ಮಹೋತ್ಸವಕ್ಕೆ ಸುತ್ತ ಮುತ್ತಲಿನ ಗ್ರಾಮಗಳ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುತ್ತಾರೆ. ಜಾತ್ರೆಯ ಅಂಗವಾಗಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ದೇವಸ್ಥಾನ ಅಭಿವೃದ್ಧಿ ಟ್ರಸ್ಟ್‌ನ ಅಧ್ಯಕ್ಷ ಶಿವಣ್ಣೇಗೌಡ ತಿಳಿಸಿದರು.

  • ಜಾತ್ರೆಯ ಅಂಗವಾಗಿ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಕಾಪಾಡಿಕೊಳ್ಳುವ ಜತೆಗೆ, ಗ್ರಾಮದ ಎಲ್ಲ ಬೀದಿಗಳಿಗೂ ಬೀದಿ ದೀಪ ಅಳವಡಿಸಲಾಗಿದೆ. ಬರುವ ಭಕ್ತರಿಗೆ ಯಾವುದೇ ಸಮಸ್ಯೆ ಆಗದಂತೆ ವ್ಯವಸ್ಥೆ ಮಾಡಲಾಗಿದೆ ಎಂದು ಗ್ರಾಮ ಪಂಚಾಯಿತಿ ಅಧ್ಯಕ್ಷ ಎಚ್.ಎನ್.ಸುಧೀರ್ ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net