ನಾಳೆ ಶ್ರಾವಣ ಮಾಸ ಸಮಾರೋಪ

suri
ಸೂರಿ ಪ್ರಭು
Published on

ಚಿಕ್ಕಮಗಳೂರು: ಶ್ರಾವಣ ಮಾಸದ ಸಮಾರೋಪ ಸೆ.14ರಂದು ಸಂಜೆ 6 ಗಂಟೆಗೆ ಚಟ್ನಹಳ್ಳಿ ಮಹೇಶ್ ತೋಟದ ಮನೆ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿ.ಸೂರಿ ಸಾಂಸ್ಕೃತಿಕ ಪ್ರತಿಷ್ಠಾನದ ಅಧ್ಯಕ್ಷ ಸೂರಿ ಪ್ರಭು ತಿಳಿಸಿದರು.

ಕಾರ್ಯಕ್ರಮದಲ್ಲಿ ಸಾಹಿತಿ ಚಟ್ನಹಳ್ಳಿ ಮಹೇಶ್ ಅವರಿಗೆ ನುಡಿ ಮಾಣಿಕ್ಯ ಅಭಿದಾನ ನೀಡಿ ಅಭಿನಂದಿಸಲಾಗುವುದು ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಜಿ.ಸೂರಿ ಸಾಂಸ್ಕೃತಿಕ ಪ್ರತಿಷ್ಠಾನದಿಂದ ಸಾಹಿತ್ಯ ಕಾರ್ಯಕ್ರಮ ನಡೆಸಿಕೊಂಡು ಬರಲಾಗುತ್ತಿದೆ. ಸಾಹಿತ್ಯ, ನಾಟಕ, ಜಾನಪದ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಸಾಹಿತ್ಯದಲ್ಲಿ ಸೇವೆ ಸಲ್ಲಿಸಿರುವ ಮಹನೀಯರನ್ನು ಪ್ರತಿವರ್ಷ ಪ್ರತಿಷ್ಠಾನದಿಂದ ಗೌರವಿಸಲಾಗುತ್ತಿದೆ. ೀ ಬಾರಿ ಸಾಹಿತಿ, ವಾಗ್ಮಿ ಚಟ್ನಹಳ್ಳಿ ಮಹೇಶ್ ಅವರನ್ನು ಆಯ್ಕೆ ಮಾಡಲಾಗಿದೆ. 2023ರ ಶ್ರಾವಣ ಮಾಸ ಜಿಲ್ಲೆಯ ಸಾಹಿತ್ಯ ಮತ್ತು ಸಂಸ್ಕೃತಿಯ ಪ್ರಸರಣದ ಹಾದಿಯಲ್ಲಿ ವಿಶೇಷ ಮೈಲಿಗಲ್ಲು ಎಂದರು.
ಶಾಸಕರಾದ ಎಚ್.ಡಿ.ತಮ್ಮಯ್ಯ, ಜಿ.ಎಚ್.ಶ್ರೀನಿವಾಸ್, ಕೆ.ಎಸ್.ಆನಂದ್, ಮಾಜಿ ಸಚಿವ ಸಿ.ಟಿ.ರವಿ, ಮಾಜಿ ಶಾಸಕರಾದ ಕೆ.ಬಿ.ಮಲ್ಲಿಕಾರ್ಜುನ್, ಬೆಳ್ಳಿ ಪ್ರಕಾಶ್, ಡಿ.ಎಸ್.ಸುರೇಶ್ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net