

ತಿ.ನರಸೀಪುರ: ತಾಲೂಕಿನ ಮುಡುಕುತೊರೆ ತೋಪಿನ ಮಠದಲ್ಲಿ ಶ್ರೀಶೈಲ ಪೀಠದ 1008ನೇ ಜಗದ್ಗುರು ಶ್ರೀಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರಿಂದ ಇಷ್ಟಲಿಂಗ ಮಹಾಪೂಜೆ ಹಾಗೂ ಲಿಂಗೈಕ್ಯ ಶ್ರೀ ಮಹಾಲಿಂಗ ಸ್ವಾಮೀಜಿ ಅವರ 3ನೇ ವರ್ಷದ ಪುಣ್ಯ ಸ್ಮರಣೆ ಕಾರ್ಯಕ್ರಮವನ್ನು ಜ.12 ರಂದು ಆಯೋಜಿಸಲಾಗಿದೆ ಎಂದು ತೋಪಿನ ಮಠದ ಶ್ರೀಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ತಿಳಿಸಿದರು.
ಶುಕ್ರವಾರ ಬೆಳಗ್ಗೆ 10.30 ಗಂಟೆಗೆ ಪುಣ್ಯ ಸ್ಮರಣೋತ್ಸವದ ಜತೆಗೆ ಧಾರ್ಮಿಕ ಸಮಾರಂಭ ನಡೆಯಲಿದ್ದು, ಶ್ರೀಶೈಲ ಪೀಠದ ಜಗದ್ಗುರು ಶ್ರೀಚನ್ನಸಿದ್ದರಾಮ ಪಂಡಿತಾರಾಧ್ಯ ಶಿವಾಚಾರ್ಯ ಭಗವತ್ಪಾದರು, ಸುತ್ತೂರು ಮಠದ ಶ್ರೀಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದಾರೆ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕನಕಪುರ ಮರಳೆ ಗವಿಮಠದ ಶ್ರೀಮುಮ್ಮಡಿ ಶಿವರುದ್ರ ಸ್ವಾಮೀಜಿ, ಮುಡುಕುತೊರೆಯ ಮಠದ ಶ್ರೀಸೌಮ್ಯನಾಥ ಸ್ವಾಮೀಜಿ ಸಮ್ಮುಖದಲ್ಲಿ ಕಾರ್ಯಕ್ರಮ ನಡೆಯಲಿದೆ. ಸಮಾರಂಭದ ನೇತೃತ್ವವನ್ನು ತೋಪಿನಮಠದ ಮಲ್ಲಿಕಾರ್ಜುನ ಶಿವಾಚಾರ್ಯ ಸ್ವಾಮೀಜಿ ವಹಿಸಲಿದ್ದಾರೆ ಎಂದು ತಿಳಿಸಿದರು.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಧಾರ್ಮಿಕ ಸಮಾರಂಭವನ್ನು ಉದ್ಘಾಟಿಸಲಿದ್ದು, ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅಧ್ಯಕ್ಷತೆ ವಹಿಸಲಿದ್ದಾರೆ. ಗುಂಡ್ಲುಪೇಟೆ ಶಾಸಕ ಗಣೇಶ್‌ಪ್ರಸಾದ್, ಮಳವಳ್ಳಿ ಶಾಸಕ ಪಿ.ಎಂ.ನರೇಂದ್ರಸ್ವಾಮಿ, ಹನೂರು ಶಾಸಕ ಎಂ.ಮಂಜುನಾಥ್, ಮಾಜಿ ಶಾಸಕ ಎಂ.ಅಶ್ವಿನ್‌ಕುಮಾರ್, ಬಿಜೆಪಿ ಮುಖಂಡ ಡಾ.ರೇವಣ್ಣ, ವಿವಿಧ ಮಠಾಧೀಶರು, ಹರಗುರು ಚರಮೂರ್ತಿಗಳು, ರಾಜಕೀಯ ಮುಖಂಡರು, ಸಮಾಜದ ಗಣ್ಯರು ಹಾಜರಿರಲಿದ್ದಾರೆ ಎಂದು ತಿಳಿಸಿದರು.
ವೀರಶೈವ ಸಮಾಜದ ಮುಖಂಡರಾದ ಅಂಗಡಿ ಶೇಖರ್, ನಾಗರಾಜು(ಜಿಪ್ಪಿ), ಹೋಟೆಲ್ ಮಹೇಶ್ ಸುದ್ದಿಗೋಷ್ಠಿಯಲ್ಲಿದ್ದರು.