ನಾಳೆ ಚಿತ್ರಸಂತೆ; ಸಂಚಾರ ಮಾರ್ಗ ಮಾರ್ಪಾಡು

traffic
Published on

ಬೆಂಗಳೂರು: ಚಿತ್ರಕಲಾ ಪರಿಷತ್ ವತಿಯಿಂದ ಭಾನುವಾರ ಕುಮಾರ ಕೃಪಾ ರಸ್ತೆಯಲ್ಲಿ 21ನೇ ಚಿತ್ರಸಂತೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ವಾಹನ ಸಂಚಾರ ನಿರ್ಬಂಧಿಸಲಾಗಿದೆ.

ದೇಶದ ಎಲ್ಲೆಡೆಯಿಂದ ಕಲಾವಿದರುಗಳ ಕಲಾಕೃತಿಗಳನ್ನು ಚಿತ್ರಕಲಾ ಪರಿಷತ್ತಿನ ಆವರಣ ಮತ್ತು ಕುಮಾರ ಕೃಪಾ ರಸ್ತೆಯ ಎರಡು ಬದಿಯ ಪಾದಚಾರಿ ಮಾರ್ಗದಲ್ಲಿ ಹಾಗೂ ಸುತ್ತಮುತ್ತಲ ರಸ್ತೆಬದಿ ಪ್ರದರ್ಶನಕ್ಕೆ ಇಡಲಿದ್ದಾರೆ. ವೀಕ್ಷಿಸಲು ಮತ್ತು ಕಲಾಕೃತಿಗಳನ್ನು ಖರೀದಿಸಲು ಹೆಚ್ಚಿನ ಸಂಖ್ಯೆಯಲ್ಲಿ ಕಲಾಭಿಮಾನಿಗಳು, ಕಲಾವಿದರು ಮತ್ತು ಸಾರ್ವಜನಿಕರು ಬರಲಿದ್ದಾರೆ.

ಆದರಿಂದ ಭಾನುವಾರ ಬೆಳಗ್ಗೆ 6 ರಿಂದ ರಾತ್ರಿ 9 ಗಂಟೆ ವರೆಗೆ ಕುಮಾರ ಕೃಪಾ ರಸ್ತೆಯಲ್ಲಿ ಮತ್ತು ಹರೇ ಕೃಷ್ಣಾ ರಸ್ತೆಯ ಉಕ್ಕಿನ ಕೆಳಸೇತುವೆ ಭಾಗದ ಶಿವಾನಂದ ವೃತ್ತದಿಂದ ಗುರುರಾಜ ಜಂಕ್ಷನ್ ಬಳಿಯ ನವ ಕರ್ನಾಟಕ ಪಬ್ಲಿಕೇಷನ್ ಕಟ್ಟಡದವರೆಗಿನ ಉತ್ತರ ಭಾಗದ ರಸ್ತೆಯಲ್ಲಿ ಎಲ್ಲ ಮಾದರಿ ವಾಹನಗಳ ಸಂಚಾರವನ್ನು ನಿಷೇಧಿಸಲಾಗಿದೆ. ಈ ರಸ್ತೆಯಲ್ಲಿ ಸಂಚರಿಸುವ ವಾಹನಗಳಿಗೆ ಪರ್ಯಾಯ ಮಾರ್ಗ ಮತ್ತು ಪಾರ್ಕಿಂಗ್‌ಗೆ ಪ್ರತ್ಯೇಕ ವ್ಯವಸ್ಥೆ ಕಲ್ಪಿಸಿದ್ದು, ಸಾರ್ವಜನಿಕರು ಪಾಲಿಸುವಂತೆ ಸಂಚಾರ ಪೊಲೀಸರು ಸೂಚಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net