

ಬೆಂಗಳೂರು: ಕೇಂದ್ರ ಸರ್ಕಾರದ ಕಾರ್ವಿುಕ ನೀತಿ ವಿರೋಧಿಸಿ ಜ.8ರಂದು ದೇಶವ್ಯಾಪಿ ಕಾರ್ವಿುಕ ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿದ್ದು, ರಾಜ್ಯದಲ್ಲಿ ಮುಷ್ಕರದ ಪರಿಣಾಮ ಕಡಿಮೆ ಪ್ರಮಾಣದಲ್ಲಿ ಇರಲಿದೆ. ದೇಶದಲ್ಲಿ ಆರ್ಥಿಕ ಬಿಕ್ಕಟ್ಟು ಉಂಟಾಗಿದ್ದು, ಜಿಡಿಪಿ ಪ್ರಮಾಣ ಕುಸಿದಿದೆ. ನಿರುದ್ಯೋಗ ಹೆಚ್ಚಾಗಿದೆ.
ಜತೆಗೆ ಕಾರ್ವಿುಕರಿಗೆ ಸಿಗಬೇಕಾದ ಸವಲತ್ತುಗಳು ಸರಿಯಾಗಿ ಸಿಗದಿರುವುದು, ಕನಿಷ್ಠ ವೇತನವನ್ನು 21 ಸಾವಿರ ರೂ.ಗೆ ಹೆಚ್ಚಿಸಬೇಕು ಎಂಬ ಬೇಡಿಕೆ ಮುಂದಿಟ್ಟುಕೊಂಡು ಸಿಪಿಐ, ಸಿಐಟಿಯು, ಎಐಟಿಯುಸಿ ಸೇರಿ ವಿವಿಧ ಕಾರ್ವಿುಕ ಸಂಘಟನೆ ಮುಷ್ಕರಕ್ಕೆ ಕರೆ ನೀಡಿವೆ. ರಾಜ್ಯದಲ್ಲೂ ಮುಷ್ಕರಕ್ಕೆ ಕಾರ್ವಿುಕ ಸಂಘಟನೆಗಳು ಸಿದ್ಧತೆ ನಡೆಸಿವೆ. ಆದರೆ, ಮುಷ್ಕರಕ್ಕೆ ಮ್ಯಾಕ್ಸಿ ಕ್ಯಾಬ್ ಸಂಘ, ಕರ್ನಾಟಕ ಟ್ರಾವೆಲ್ ಆಪರೇಟರ್ ಸಂಘ, ಲಾರಿ ಮಾಲೀಕರ ಸಂಘ, ಓಲಾ-ಉಬರ್ ಚಾಲಕರ ಸಂಘ ಸೇರಿ ಇನ್ನಿತರ ಸಂಘಗಳು ಬಾಹ್ಯ ಬೆಂಬಲ ನೀಡಿವೆ.
ಜತೆಗೆ ಸಾರಿಗೆ ನಿಗಮಗಳ ಕೆಲ ನೌಕರರ ಸಂಘಟನೆಗಳು ಮುಷ್ಕರಕ್ಕೆ ಸಹಕಾರ ನೀಡುತ್ತಿಲ್ಲ. ಹೀಗಾಗಿ ಜ. 8ರಂದು ದಿನಬಳಕೆ ವಸ್ತುಗಳು ಎಂದಿನಂತೆ ದೊರೆಯಲಿವೆ. ಜತೆಗೆ ಕಚೇರಿಗೆ ತೆರಳುವವರು ಸೇರಿ ಇನ್ನಿತರರಿಗೆ ಸಾರಿಗೆ ವ್ಯವಸ್ಥೆಯಲ್ಲಿ ಯಾವುದೇ ಸಮಸ್ಯೆ ಉಂಟಾಗುವುದಿಲ್ಲ.
ಕೆಎಸ್ಆರ್ಟಿಸಿ ನೌಕರರ ಪ್ರತಿಭಟನೆ: ಮೋಟಾರು ವಾಹನ ತಿದ್ದುಪಡಿ ಕಾಯ್ದೆ 2019 ವಾಪಾಸು ಪಡೆಯುವಂತೆ, ಪ್ರಯಾಣಿಕರ ಸಾರಿಗೆಯನ್ನು ರಾಷ್ಟ್ರೀಕರಣ ಮಾಡುವಂತೆ ಸೇರಿ ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ. 8ರಂದು ಪ್ರತಿಭಟನೆಗೆ ಕೆಎಸ್ಆರ್ಟಿಸಿ ನೌಕರರ ಫೆಡರೇಷನ್ ಕರೆ ನೀಡಿದೆ.
ನೌಕರರು ಮುಷ್ಕರದಲ್ಲಿ ಪಾಲ್ಗೊಂಡರೆ ಬಸ್ ಸಂಚಾರದಲ್ಲಿ ವ್ಯತ್ಯಯ ಉಂಟಾಗಲಿದೆ. ಜ.8ರಂದು ದಿನದ ರಜೆ ಮತ್ತು ಅನಿವಾರ್ಯ ರಜೆ ಹೊರತುಪಡಿಸಿ ಬೇರೆ ಯಾವುದೇ ನೌಕರರಿಗೂ ರಜೆ ನೀಡುವುದಿಲ್ಲ ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕ ಶಿವಯೋಗಿ ಸಿ.ಕಳಸದ ಆದೇಶಿಸಿದ್ದಾರೆ. ಮುಷ್ಕರದಲ್ಲಿ ಪಾಲ್ಗೊಳ್ಳಲು ರಜೆ ಹಾಕಿದರೆ ವೇತನ ಕಡಿತಗೊಳಿಸುವುದಾಗಿ ಎಚ್ಚರಿಕೆ ನೀಡಲಾಗಿದೆ.
ಆಟೋ ವ್ಯತ್ಯಯ
ಸಂಚಾರಿ ಪೊಲೀಸರ ಕಿರಕುಳ ತಪ್ಪಿಸುವುದು ಸೇರಿ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆಟೋ ಡ್ರೖೆವರ್ಸ್ ಯೂನಿಯನ್ (ಸಿಐಟಿಯು) ವತಿಯಿಂದ ಜ. 8ರಂದು ಬೆಂಗಳೂರಿನಲ್ಲಿ ಆಟೋ ಮುಷ್ಕರ ನಡೆಸಲಾಗುತ್ತಿದೆ. ಪ್ರತಿಭಟನೆಯಲ್ಲಿ ನಗರದಲ್ಲಿನ 1 ಲಕ್ಷಕ್ಕೂ ಹೆಚ್ಚಿನ ಆಟೋಗಳ ಪೈಕಿ ಶೇ.50 ಆಟೋ ಚಾಲಕರು ಪಾಲ್ಗೊಳ್ಳುವ ನಿರೀಕ್ಷೆ ಹೊಂದಲಾಗಿದೆ.
ಪರಿಸ್ಥಿತಿ ಬಿಗಡಾಯಿಸಿದರೆ ಶಾಲೆಗೆ ರಜೆ
ಭಾರತ ಬಂದ್ ಕುರಿತು ಖಾಸಗಿ ಅನುದಾನ ರಹಿತ ಶಾಲೆಗಳಿಂದ ಯಾವುದೇ ರೀತಿಯ ನಿರ್ಧಾರ ಕೈಗೊಳ್ಳುವುದಿಲ್ಲ. ಮಕ್ಕಳು ಹಾಗೂ ಶಿಕ್ಷಕರ ಸುರಕ್ಷತಾ ದೃಷ್ಟಿಯಿಂದ ಸರ್ಕಾರ ಕೈಗೊಳ್ಳುವ ನಿರ್ಧಾರಕ್ಕೆ ಖಾಸಗಿ ಶಾಲಾ ಮಂಡಳಿಗಳು ಬದ್ಧವಾಗಿರಲಿದೆ. ಶಾಲೆಗಳಿಗೆ ರಜೆ ಘೊಷಿಸುವುದು ಅಥವಾ ಘೊಷಸದಿರುವುದು ಸರ್ಕಾರವೇ ನಿರ್ಧರಿಸಬೇಕು. ಒಂದು ವೇಳೆ ಸ್ಥಳೀಯವಾಗಿ ಪರಿಸ್ಥಿತಿ ಬಿಗಿಡಾಯಿಸಿದರೆ, ಆಯಾ ಶಿಕ್ಷಣ ಸಂಸ್ಥೆಗಳು ಸ್ವತಂತ್ರವಾಗಿ ನಿರ್ಧಾರ ಕೈಗೊಳ್ಳಬಹುದು ಎಂದು ಖಾಸಗಿ ಶಾಲಾ ಮಂಡಳಿಗಳ ಒಕ್ಕೂಟ (ಕ್ಯಾಮ್್ಸ) ಪ್ರಧಾನ ಕಾರ್ಯದರ್ಶಿ ಡಿ. ಶಶಿಕುಮಾರ್ ತಿಳಿಸಿದ್ದಾರೆ.
ಸಾರಿಗೆ ನೌಕರರ ಹಿತಕ್ಕಾಗಿ ಜ. 8ರಂದು ಮುಷ್ಕರಕ್ಕೆ ಕರೆ ನೀಡಲಾಗಿದೆ. ಅದರಲ್ಲಿ ಪಾಲ್ಗೊಳ್ಳುವಂತೆ ನೌಕರರಿಗೆ ಮನವಿ ಮಾಡಲಾಗಿದೆ. ಅಂದು ಟೌನ್ಹಾಲ್ನಿಂದ ಸ್ವಾತಂತ್ರ್ಯ ಉದ್ಯಾನದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಗುವುದು. |ಎಚ್.ಡಿ.ರೇವಪ್ಪ ಕೆಎಸ್ಆರ್ಟಿಸಿ ನೌಕರರ ಫೆಡರೇಷನ್ ಅಧ್ಯಕ್ಷ ಕಾರ್ವಿುಕ ಸಂಘಟನೆಗಳು ದೇಶವ್ಯಾಪಿ ನಡೆಸುತ್ತಿರುವ ಮುಷ್ಕರಕ್ಕೆ ಬಾಹ್ಯ ಬೆಂಬಲ ನೀಡಲು ನಿರ್ಧರಿಸಲಾಗಿದೆ. ಕ್ಯಾಬ್ ಸೇವೆಗಳಲ್ಲಿ ವ್ಯತ್ಯಾಸವಿರುವುದಿಲ್ಲ. | ರಾಧಾಕೃಷ್ಣಹೊಳ್ಳ ರಾಜ್ಯ ಟ್ರಾವೆಲ್ ಮಾಲೀಕರ ಸಂಘದ ಅಧ್ಯಕ್ಷ ಕಚೇರಿಗಳಿಗೆ ಮತ್ತು ಪ್ರವಾಸಿಗರಿಗೆ ಕ್ಯಾಬ್ ಸೇವೆ ಎಂದಿನಂತೆ ನೀಡಲಾಗುವುದು. ಅದರಲ್ಲಿ ಯಾವುದೇ ವ್ಯತ್ಯಯವಿರುವುದಿಲ್ಲ. | ಭೈರವ ಸಿದ್ದರಾಮು ಮ್ಯಾಕ್ಸಿ ಕ್ಯಾಬ್ ಮಾಲೀಕರ ಸಂಘದ ಅಧ್ಯಕ್ಷ