

ಬೆಂಗಳೂರು: ಸುಲಲಿತ ವ್ಯವಹಾರ (ಈಸ್ ಆಫ್ ಡೂಯಿಂಗ್ ಬಿಜಿನೆಸ್)ಕ್ಕೆ ಸಂಬಂಧಿಸಿದಂತೆ ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ (ಡಿಪಿಐಐಟಿ) ಬಿಡುಗಡೆ ಮಾಡಿರುವ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನ ಪಡೆದುಕೊಂಡಿದೆ.
2020ರ ಸೆಪ್ಟೆಂಬರ್ನಲ್ಲಿ ಬಿಡುಗಡೆಯಾಗಿದ್ದ ಶ್ರೇಯಾಂಕ ಪಟ್ಟಿಯಲ್ಲಿ ಕರ್ನಾಟಕ 17ನೇ ಸ್ಥಾನದಲ್ಲಿತ್ತು, ಈಗ ಟಾಪ್ ಅಚೀವರ್ ಆಗಿ ಹೊರಹೊಮ್ಮಿದೆ. ಕೇಂದ್ರ ಸರ್ಕಾರ 2020ರ ವಹಿವಾಟು ಸುಧಾರಣೆ ಕ್ರಿಯಾ ಯೋಜನೆ (ಎಸ್ಬಿಆರ್ಎಪಿ) ಅಡಿಯಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ವಾರ್ಷಿಕ ಸುಧಾರಣಾ ಕ್ರಮಗಳ ಪರಿಶೀಲನಾ ವರದಿ ಗುರುವಾರ ಬಿಡುಗಡೆಯಾಗಿದೆ. ಡಿಪಿಐಐಟಿ ಸೂಚಿಸಿದ್ದ 187 ಸುಧಾರಣಾ ಕ್ರಮಗಳಲ್ಲಿ ಶೇ.100 ಅನುಷ್ಠಾನಗೊಳಿಸಿದ್ದರೂ, ಕರ್ನಾಟಕ 2019ರಲ್ಲಿ 17ನೇ ಸ್ಥಾನಕ್ಕೆ ಕುಸಿದಿತ್ತು. ಹಲವು ಸುಧಾರಣಾ ಕ್ರಮಗಳ ಅನುಷ್ಠಾನದ ಜತೆಗೆ ರಾಜ್ಯದ 30ಕ್ಕೂ ಹೆಚ್ಚು ಇಲಾಖೆಗಳ ನಡುವಿನ ಸಮನ್ವಯತೆ ಮತ್ತು ಪೂರಕ ಪ್ರಯತ್ನಗಳಿಂದ ಪ್ರಸಕ್ತ ಸಾಲಿನಲ್ಲಿ ಅಗ್ರ ಶ್ರೇಣಿಗೆ ಏರಲು ಸಾಧ್ಯವಾಗಿದೆ. ಆಂಧ್ರಪ್ರದೇಶ, ಗುಜರಾತ್, ಹರಿಯಾಣ, ಪಂಜಾಬ್, ತಮಿಳುನಾಡು, ತೆಲಂಗಾಣ ಸಹ ಅಗ್ರ ಸಾಧಕ ರಾಜ್ಯಗಳ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿವೆ.
| ಮುರುಗೇಶ ಆರ್. ನಿರಾಣಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ
| ಡಾ.ಇ.ವಿ.ರಮಣರೆಡ್ಡಿ ಕೈಗಾರಿಕೆ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ
| ಗುಂಜನ್ ಕೃಷ್ಣ ಕೈಗಾರಿಕಾಭಿವೃದ್ಧಿ ಆಯುಕ್ತರು