ನಮ್ಮ ಹಳ್ಳಿಗಳ ಅಭಿವೃದ್ಧಿಗಾಗಿ ನೆರೆರಾಜ್ಯಗಳಿಗೆ ಶಾಸಕರ ‘ದಂಡ’ಯಾತ್ರೆ!

Vidhana Soudha vvani
Published on

ಬೆಂಗಳೂರು: ನಮ್ಮ ರಾಜ್ಯದಲ್ಲಿ ಗ್ರಾಮಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎಂಬುದರ ಬಗ್ಗೆ ತಿಳಿದುಕೊಂಡು ಬರಲು ಶಾಸಕರು ನೆರೆ ರಾಜ್ಯಗಳಿಗೆ ಪ್ರವಾಸ ಹೋಗಲಿದ್ದಾರೆ! ಅದೂ ಸ್ವಂತ ವೆಚ್ಚದಲ್ಲಿ ಅಲ್ಲ, ಸರ್ಕಾರದ ಖರ್ಚಿನಲ್ಲಿ!

ಸ್ಥಳೀಯ ಸಂಸ್ಥೆಗಳಿಂದ ಆಯ್ಕೆಯಾದ ವಿಧಾನಪರಿಷತ್‌ನ 25 ಸದಸ್ಯರನ್ನು ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಲು ಸ್ವತಃ ರಾಜ್ಯ ಸರ್ಕಾರವೇ ಸಜ್ಜಾಗಿದೆ. ಇದನ್ನು ಸ್ವತಃ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಸಚಿವ ಕೆ.ಎಸ್.ಈಶ್ವರಪ್ಪ ಅವರೇ ವಿಧಾನಪರಿಷತ್‌ನಲ್ಲಿ ಶುಕ್ರವಾರ ಸಮರ್ಥಿಸಿಕೊಂಡಿದ್ದಾರೆ. ಇದನ್ನೂ ಓದಿರಿ ಛೇ..ಛೇ.. ಇಂದೆಂಥ ಅಸಹ್ಯ? ಕಲಾಪದಲ್ಲೇ ಕೂತು ಅಶ್ಲೀಲ ವಿಡಿಯೋ ನೋಡಿದ ಕಾಂಗ್ರೆಸ್​ ಎಂಎಲ್​ಸಿ

ಕೇರಳ ಮತ್ತು ಆಂಧ್ರಪ್ರದೇಶದಲ್ಲಿ ಅನುಷ್ಠಾನಗೊಂಡಿರುವ ಗ್ರಾಮಗಳ ಅಭಿವೃದ್ಧಿಗೆ ಕೈಗೊಳ್ಳಲಾಗಿರುವ ಯೋಜನೆಗಳ ಅಧ್ಯಯನ ಮಾಡಬೇಕಿದೆ. ಅದಕ್ಕಾಗಿ ಸ್ಥಳೀಯ ಸಂಸ್ಥೆಗಳಿಂದ ವಿಧಾನಪರಿಷತ್‌ಗೆ ಆಯ್ಕೆಯಾಗಿರುವ 25 ಸದಸ್ಯರನ್ನು ಕೇರಳ ಮತ್ತು ಆಂಧ್ರಪ್ರದೇಶಕ್ಕೆ ಅಧ್ಯಯನಕ್ಕಾಗಿ ಕಳುಹಿಸಲು ನಿರ್ಧರಿಸಲಾಗಿದೆ. ಶೀಘ್ರದಲ್ಲಿಯೇ ಈ ಪ್ರವಾಸಕ್ಕೆ ಎಲ್ಲ ವ್ಯವಸ್ಥೆ ಮಾಡಲಾಗುವುದು ಎಂದು ಪ್ರಶ್ನೋತ್ತರ ವೇಳೆಯಲ್ಲಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net