ನ.13 ಮತ್ತು 14ರಂದು ದತ್ತಪೀಠಕ್ಕೆ ಪ್ರವಾಸಿಗರಿಗೆ ನಿರ್ಬಂಧ: ಪ್ರವೇಶ ನಿಷೇಧದ ಸಮಯ ಇಲ್ಲಿದೆ...

Dattapeeta
Published on

ಚಿಕ್ಕಮಗಳೂರು: ದತ್ತಪೀಠ ಹಾಗೂ ಸುತ್ತಮುತ್ತಲಿನ ಪ್ರದೇಶಗಳಿಗೆ ನ.13ರ ಬೆಳಗ್ಗೆ 6ರಿಂದ ನ.14ರ ಬೆಳಗ್ಗೆ 10ರ ವರೆಗೆ ಪ್ರವಾಸಿಗರ ಪ್ರವೇಶ ನಿಷೇಧಿಸಲಾಗಿದೆ.

ದತ್ತಮಾಲೆ ಅಭಿಯಾನ ಪ್ರಯುಕ್ತ ಶ್ರೀರಾಮ ಸೇನೆ ಕಾರ್ಯಕರ್ತರು ನ.13ರಂದು ಶ್ರೀ ಗುರು ದತ್ತಾತ್ರೇಯ ಪೀಠಕ್ಕೆ ಆಗಮಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರ ಭೇಟಿಯನ್ನು ನಿಷೇಶಿಸಲಾಗಿದೆ. ಲಾಂಗ್​ ಚಾಸಿಸ್​ ಇರುವ ವಾಹನಗಳ ಸಂಚಾರವನ್ನೂ ನಿರ್ಬಂಧಿಸಿ ಜಿಲ್ಲಾಧಿಕಾರಿ ಕೆ.ಎನ್​.ರಮೇಶ್​ ಆದೇಶ ಹೊರಡಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net