

ಮೈಸೂರು: ಎರಡು ಬೈಕ್‌ಗಳು ಮತ್ತು ಟ್ರ್ಯಾಕ್ಟರ್ ನಡುವೆ ಭೀಕರ ಅಪಘಾತ ಸಂಭವಿಸಿದ್ದು, ಓರ್ವ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಮತ್ತೊಬ್ಬ ಸವಾರನ ಸ್ಥಿತಿ ಗಂಭೀರವಾಗಿದೆ.
ಎಚ್.ಡಿ.ಕೋಟೆ ತಾಲೂಕಿನ ಹೊಮ್ಮರಗಳ್ಳಿ ಬಳಿ ಮಂಗಳವಾರ ಈ ಅವಘಡ ಸಂಭವಿಸಿದ್ದು, ನಂಜನಗೂಡು ತಾಲೂಕಿನ ಇಬ್ಜಾಲ ಗ್ರಾಮದ ಮಂಜುನಾಥ್ (35) ಮೃತಪಟ್ಟಿದ್ದಾನೆ. ಮತ್ತೊಂದು ಬೈಕ್ ಸವಾರ ಶ್ರೀನಿವಾಸ್ ಗಂಭೀರ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿರಿ ಹೆತ್ತಮಕ್ಕಳನ್ನೇ ಬೆತ್ತಲೆಗೊಳಿಸಿ ಪೂಜೆ ಮಾಡಿದ್ರು, ಬಳಿಕ ತಲೆ ಒಡೆದು ಕೊಂದೇಬಿಟ್ರು! ಕಾರಣ ಕೇಳಿದ್ರೆ ಬೆಚ್ಚಿಬೀಳ್ತೀರಿ