ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಬಾಲಕ ಸಾವು

Death Case
Published on

ಬೆಳಗಾವಿ: ಟ್ರಾೃಕ್ಟರ್ ಹಿಂಬದಿ ಚಕ್ರಕ್ಕೆ ಸಿಲುಕಿ ಬಾಲಕನೋರ್ವ ಮೃತಪಟ್ಟ ಘಟನೆ ಇಲ್ಲಿನ ವಡಗಾವಿಯಲ್ಲಿ ಸೋಮವಾರ ಸಂಭವಿಸಿದೆ. ವಡಗಾವಿ ನಿವಾಸಿ ಆರುಷ್ ಮೋದೇಕರ್(8) ಮೃತ ಬಾಲಕ.

ವಡಗಾವಿ ಬಾಲಕೃಷ್ಣ ನಗರದ 2ನೇ ಕ್ರಾಸ್‌ನಲ್ಲಿ ಆಟವಾಡುತ್ತಿದ್ದ ವೇಳೆ ಮಣ್ಣು ತುಂಬಿದ ಟ್ರ್ಯಾಕ್ಟರ್ ಹೋಗುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದ ಆರುಷ್ ಟ್ರ್ಯಾಕ್ಟರ್ ಚಕ್ರದಡಿ ಸಿಲುಕಿ ಮೃತಪಟ್ಟಿದ್ದಾನೆ.

ಈ ಕುರಿತು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಶಹಾಪುರ ಠಾಣೆ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net