ನಾಳೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ IPL ಮ್ಯಾಚ್; ಬದಲಾದ ಸಂಚಾರ ಮಾರ್ಗದ ಮಾಹಿತಿ ಹೀಗಿದೆ…

trafic
Published on

ಬೆಂಗಳೂರು: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐಪಿಎಲ್-2023 ಕ್ರಿಕೆಟ್ ಪಂದ್ಯಾವಳಿಯ ಹಿನ್ನೆಲೆಯಲ್ಲಿ ವಾಹನಗಳ ಸುಗಮ ಸಂಚಾರಕ್ಕಾಗಿ ತಾತ್ಕಾಲಿಕವಾಗಿ ಸಂಚಾರ ಮಾರ್ಗ ಬದಲಾಯಿಸಲಾಗಿದೆ. ಇದನ್ನೂ ಓದಿ: ಬಿಜೆಪಿ ಮನುಸ್ಮೃತಿ ಆಧಾರದ ಸಂವಿಧಾನ ರಚನೆ ಆಗಬೇಕೆಂದು ಬಯಸಿದೆ; ಸಿದ್ದರಾಮಯ್ಯ

ಏಪ್ರಿಲ್ 10ರ ಸಂಜೆ 4 ಗಂಟೆಯಿಂದ ರಾತ್ರಿ 10 ಗಂಟೆ ವರೆಗೆ ಅನ್ವಯ ಆಗಲಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ. ಕ್ವೀನ್ಸ್ ರಸ್ತೆ, ಎಂ.ಜಿ. ರಸ್ತೆ, ಎಂ.ಜಿ.ರಸ್ತೆಯಿಂದ ಕಬ್ಬನ್ ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್ ರಸ್ತೆ, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ಸ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ ಬಾ ರಸ್ತೆ, ಅಂಬೇಡ್ಕರ್ ವೀದಿ ರಸ್ತೆ, ಟ್ರಿನಿಟಿ ವೃತ್ತ, ಲ್ಯಾವೆಲ್ಲೆ ರಸ್ತೆ, ವಿಠಲ್ ಮಲ್ಯ ರಸ್ತೆ ಮತ್ತು ನೃಪತುಂಗ ರಸ್ತೆಯಲ್ಲಿ ವಾಹನಗಳ ಪಾರ್ಕಿಂಗ್‌ನ್ನು ನಿರ್ಬಂಧಿಸಲಾಗಿದೆ.

ಕಿಂಗ್ಸ್ ರಸ್ತೆ, ಬಿಆರ್‌ವಿ ಮೈದಾನ, ಕಂಠೀರವ ಸ್ಟೇಡಿಯಂ, ಯುಬಿ ಸಿಟಿ ಪಾರ್ಕಿಂಗ್ ಸ್ಥಳ ಮತ್ತು ಶಿವಾಜಿನಗರ ಬಿಎಂಟಿಸಿ ಬಸ್ ನಿಲ್ದಾಣದ ಮೊದಲ ಮಹಡಿ ಮತ್ತು ಓಲ್ಡ್ ಕೆಜಿಐಡಿ ಬಿಲ್ಡಿಂಗ್ ಸಮೀಪ ವಾಹನಗಳನ್ನು ನಿಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಸಂಚಾರ ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net