ಟ್ರೈನಿ ಸೇನಾ ಅಧಿಕಾರಿಗೆ ಬೆದರಿಸಿ, ಸ್ನೇಹಿತೆ ಮೇಲೆ ಗ್ಯಾಂಗ್​ ರೇಪ್​!

Rape1
Published on

ಭೋಪಾಲ್: ಕಿಡಿಗೇಡಿಗಳ ಗುಂಪೊಂದು ತಮ್ಮ ಸ್ನೇಹಿತರೊಂದಿಗೆ ಹೊರಗೆ ಹೋಗಿದ್ದ ಟ್ರೈನಿ ಸೇನಾ ಅಧಿಕಾರಿ ಮೇಲೆ ಹಲ್ಲೆ ನಡೆಸಿ, ಅವರಿಂದ ಹಣ ವಸೂಲಿ ಮಾಡಿದ್ದಲ್ಲದೆ, ಅವರ ಗೆಳತಿ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ.

ಇಂದೋರ್‌ನ ಮೋ ಆರ್ಮಿ ಕಾಲೇಜಿನಲ್ಲಿ ತರಬೇತಿ ಪಡೆಯುತ್ತಿರುವ ಇಬ್ಬರು ಟ್ರೈನಿ ಆರ್ಮಿ ಅಧಿಕಾರಿ ತಮ್ಮ ಗೆಳತಿಯರೊಂದಿಗೆ ಸಮೀಪದ ಪಿಕ್ನಿಕ್ ಸ್ಥಳಕ್ಕೆ ತೆರಳಿದ್ದಾರೆ. ಆಗ ಅಲ್ಲಿ ಕೆಲವು ಪುಂಡರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ದುಷ್ಕರ್ಮಿಗಳು ಮೊದಲು ಅವರಿಂದ ಹಣ ಮತ್ತು ಚಿನ್ನಾಭರಣ ತೆಗೆದುಕೊಡುವಂತೆ ಬೆದರಿಕೆ ಹಾಕಿದ್ದಾರೆ. ನಂತರ ಅವರ ಗೆಳತಿ ಮೇಲೆ ಅತ್ಯಾಚಾರ ಎಸಗಿದ್ದಾರೆ.

ಪುಂಡರ ದಾಳಿಯಿಂದ ತಪ್ಪಿಸಿಕೊಂಡ ಟ್ರೈನಿ ತರಬೇತಿ ಅಧಿಕಾರಿ ಪೊಲೀಸ್​ ಮತ್ತು ಸೇನಾ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕಾಗಮಿಸಿದಾಗ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆಕೆಯ ಮೇಲೆ ಅತ್ಯಾಚಾರ ನಡೆದಿರುವುದು ದೃಢಪಟ್ಟಿದೆ.

ಪೊಲೀಸರು ಪ್ರಕರಣ ದಾಖಲಿಸಿಕೊಂಡು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಅವರು ಈ ಹಿಂದೆ ಹಲವು ಕ್ರಿಮಿನಲ್ ದಾಖಲೆ ಹೊಂದಿರುವುದು ಕಂಡುಬಂದಿದೆ. ತನಿಖೆ ಮುಂದುವರಿದಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net