ಯುಜಿಸಿಇಟಿ ಕೌನ್ಸೆಲಿಂಗ್‌ಗೆ ತರಬೇತಿ

Published on

ಚಿಂತಾಮಣಿ: ಯುಜಿಸಿಇಟಿ-2025ರ ಅಡಿಯಲ್ಲಿ ಇಂಜಿನಿಯರಿಂಗ್ ಕೋರ್ಸ್ ಪ್ರವೇಶಕ್ಕಾಗಿ ಅಭ್ಯರ್ಥಿಗಳಿಗೆ ಕೌನ್ಸೆಲಿಂಗ್ ಪ್ರಕ್ರಿಯೆ ಬಗ್ಗೆ ಸಮಗ್ರ ಮಾಹಿತಿ ನೀಡುವ ಉದ್ದೇಶದಿಂದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಘಟಕ ಕಾಲೇಜು ಸಹಯೋಗದೊಂದಿಗೆ ಸರ್ಕಾರಿ ಪಾಲಿಟೆಕ್ನಿಕ್ ಆವರಣ ಚಿಂತಾಮಣಿಯಲ್ಲಿ ಜೂ.28ರಂದು ಬೆಳಗ್ಗೆ 9.30ರಿಂದ ಮಧ್ಯಾಹ್ನ 1.30ರವರೆಗೆ ವಿಶೇಷ ತರಬೇತಿ ಕಾರ್ಯಕ್ರಮ ಆಯೋಜಿಸಲಾಗಿದೆ. ತರಬೇತಿಯಲ್ಲಿ 2025-26ನೇ ಸಾಲಿನಲ್ಲಿ ಇಂಜಿನಿಯರಿಂಗ್ ಪದವಿಗೆ ದಾಖಲಾತಿ ಬಯಸುವ ವಿದ್ಯಾರ್ಥಿಗಳಿಗೆ ಕೋರ್ಸ್‌ಗಳ ಆಯ್ಕೆ ಪ್ರಕ್ರಿಯೆ, ಕೋರ್ಸ್‌ಗಳ ವಿವರಣೆ, ಕಾಲೇಜು ಮತ್ತು ಕೋರ್ಸ್‌ಗಳ ಆದ್ಯತೆ ನೀಡುವ ವಿಧಾನ ಮತ್ತು ತಾಂತ್ರಿಕ ಸಲಹೆಗಳ ಕುರಿತು ಮಾಹಿತಿ ನೀಡಲಾಗುವುದು. ಆಸಕ್ತ ವಿದ್ಯಾರ್ಥಿಗಳು ತಪ್ಪದೇ ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಲು ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net