ಚುನಾವಣಾ ಕಾರ್ಯ ನಿಯಮಾನುಸಾರ ನಡೆಯಲಿ

1 Dwd 6 Divya prabhu
Published on

ಧಾರವಾಡ: ಚುನಾವಣಾ ಕಾರ್ಯಗಳು ನಿಯಮಾನುಸಾರ ನಡೆಯಬೇಕು. ಅದರಲ್ಲಿ ಸೆಕ್ಟರ್ ಅಽಕಾರಿಗಳ ಪಾತ್ರ ಬಹು ಮುಖ್ಯವಾಗಿದೆ. ಅವರು ಅವರು ಚುನಾವಣಾಽಕಾರಿ ಮತ್ತು ಮತಗಟ್ಟೆಯಲ್ಲಿನ ಪಿ.ಆರ್. ಅಽಕಾರಿ ಮಧ್ಯೆ ಸಂಪರ್ಕ ಸೇತುವೆಯಾಗಿ ಕಾರ್ಯ ನಿರ್ವಹಿಸಬೇಕು ಎಂದು ಜಿಲ್ಲಾ ಚುನಾವಣಾಽಕಾರಿ ಹಾಗೂ ಜಿಲ್ಲಾಽಕಾರಿ ದಿವ್ಯ ಪ್ರಭು ಹೇಳಿದರು.
ನಗರದಲ್ಲಿ ಸೋಮವಾರ ಆಯೋಜಿಸಿದ್ದ ಸಂಪನ್ಮೂಲ ವ್ಯಕ್ತಿಗಳ ತರಬೇತಿ ಕಾರ್ಯಗಾರದಲ್ಲಿ ಅವರು ಮಾತನಾಡಿದರು.
ಚುನಾವಣಾ ಕಾರ್ಯ ಎಲ್ಲರೂ ಒಟ್ಟಾಗಿ ಕೆಲಸ ಮಾಡುವ ಕೆಲಸ. ತರಬೇತಿಯಲ್ಲಿ ನೀಡುವ ಮಾಹಿತಿಯನ್ನು ಸರಿಯಾಗಿ ತಿಳಿದುಕೊಂಡು ಕರ್ತವ್ಯಗಳನ್ನು ನಿರ್ವಹಿಸಬೇಕು. ಚುನಾವಣಾ ಆಯೋಗ ನೀಡಿರುವ ನಿರ್ದೇಶಗಳನ್ನು ಪಾಲಿಸಬೇಕು. ಗೊಂದಲ ಅಥವಾ ತೊಂದರೆ ಎದುರಾದರೆ ಮೇಲಽಕಾರಿಗಳನ್ನು ಸಂಪರ್ಕಿಸಿ ಪರಿಹರಿಸಿಕೊಳ್ಳಬೇಕು ಎಂದರು.
ಹೆಸ್ಕಾA ಪ್ರಧಾನ ವ್ಯವಸ್ಥಾಪಕ ಸಿದ್ದು ಹುಲ್ಲೋಳಿ ಸೆಕ್ಟರ್ ಅಽಕಾರಿಗಳಿಗೆ ಪ್ರಾತ್ಯಕ್ಷಿಕೆ ಮೂಲಕ ತರಬೇತಿ ನೀಡಿದರು. ೨೮೦ ಅಽಕಾರಿಗಳು ಭಾಗವಹಿಸಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net