ಉಳ್ಳೂರು ಪಿಡಿಒ ವರ್ಗಾವಣೆ ಮಾಡಿ

sgr manavi (1)
ಉಳ್ಳೂರು ಪಿಡಿಒ ಅವರನ್ನು ವರ್ಗಾಯಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ತಾಪಂ ಇಒ ಗುರುಕೃಷ್ಣ ಶೆಣೈ ಅವರಿಗೆ ಮನವಿ ಸಲ್ಲಿಸಿತು. ವಸೀಮ್, ಪಾರ್ವತಮ್ಮ, ರಾಘವೇಂದ್ರ, ಪ್ರಶಾಂತ್ ಇತರರಿದ್ದರು.
Published on

ಸಾಗರ: ತಾಲೂಕಿನ ಉಳ್ಳೂರು ಪಿಡಿಒ ಅವರನ್ನು ವರ್ಗಾಯಿಸುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ಪದಾಧಿಕಾರಿಗಳು ತಾಪಂ ಇಒ ಗುರುಕೃಷ್ಣ ಶೆಣೈ ಅವರಿಗೆ ಮನವಿ ಸಲ್ಲಿಸಿದರು.

ಪಿಡಿಒ ಉತ್ತಮವಾಗಿ ಕೆಲಸ ಮಾಡಿದರೆ ಗ್ರಾಮಗಳು ಅಭಿವೃದ್ಧಿಯಾಗುತ್ತದೆ. ಆದರೆ ಉಳ್ಳೂರಲ್ಲಿ ಪಂಚಾಯಿತಿ ಆಡಳಿತ ವ್ಯವಸ್ಥೆ ತಲೆಕೆಳಗಾಗಿದೆ. ಗ್ರಾಪಂನಲ್ಲಿ ಕಸ ವಿಲೇವಾರಿ ವಾಹನ ಇದ್ದರೂ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಮಳೆಯಲ್ಲಿ ನಿಲ್ಲಿಸುತ್ತಿರುವುದರಿಂದ ತುಕ್ಕು ಹಿಡಿಯುತ್ತಿದೆ. ಊರಿನ ಸ್ವಚ್ಛತೆಗೆ ಆದ್ಯತೆ ನೀಡುತ್ತಿಲ್ಲ. ಆಸ್ಪತ್ರೆ ರಸ್ತೆಯಲ್ಲಿ ಹೊಂಡಗುಂಡಿಗಳಾಗಿ ಸಂಚಾರಕ್ಕೆ ಅಡಚಣೆ ಆಗುತ್ತಿದೆ. ಸರಿಯಾದ ಸಮಯಕ್ಕೆ ಇ-ಸ್ವತ್ತು ಮಾಡಿಸಿಕೊಳ್ಳಲು ಕಚೇರಿಗೆ ಹತ್ತಾರು ಬಾರಿ ಅಲೆಯಬೇಕು ಎಂದು ದೂರಿದರು.

ಚರಂಡಿಗಳು ಸ್ವಚ್ಛವಾಗಿರದ ಕಾರಣಕ್ಕೆ ಮಳೆ ನೀರು ರಸ್ತೆ ಮೇಲೆ ಹರಿದು ರಸ್ತೆ ಹಾಳಾಗುತ್ತಿದೆ. ಗ್ರಾಮ ಸಭೆಗಳಲ್ಲಿ ಕೈಗೊಂಡ ನಿರ್ಣಯಗಳು ಕಾರ್ಯರೂಪಕ್ಕೆ ಬರುತ್ತಿಲ್ಲ. ಸರಿಯಾದ ಸಮಯಕ್ಕೆ ಗ್ರಾಮಸಭೆ ನಡೆಸುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸದ ಪಿಡಿಒ ಅವರನ್ನು ವರ್ಗಾಯಿಸಬೇಕು ಎಂದು ಒತ್ತಾಯಿಸಿದರು.

ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ತಾಲೂಕು ಅಧ್ಯಕ್ಷ ವಸೀಮ್, ಮಹಿಳಾ ಅಧ್ಯಕ್ಷೆ ಪಾರ್ವತಮ್ಮ, ರಾಘವೇಂದ್ರ, ಆಸ್ೀ, ಪ್ರಶಾಂತ್, ಬಸವರಾಜ್, ಮೋಹನ್ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net