ಖಜಾನೆ ಖಾಲಿಯಾಗಿ ಅಭಿವೃದ್ಧಿ ಶೂನ್ಯ

hos bjp
ಹೊಸನಗರದಲ್ಲಿ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟನಾ ಕಾರ್ಯಕ್ರಮದಲ್ಲಿ ಸಂಸದ ಬಿ.ವೈ.ರಾಘವೇಂದ್ರ ಮಾತನಾಡಿದರು. ಆರಗ ಜ್ಞಾನೇಂದ್ರ, ಹರತಾಳು ಹಾಲಪ್ಪ, ಬಿ.ಸ್ವಾಮಿರಾವ್ ಇತರರಿದ್ದರು.
Published on

ಹೊಸನಗರ: ಈ ಬಾರಿ ಲೋಕಸಭೆ ಚುನಾವಣೆ ಒಂದು ತಪಸ್ಸಿನಂತಿದ್ದು, ಅದನ್ನು ಸಾಧಿಸುವ ಕೆಲಸ ಕಾರ್ಯಕರ್ತರ ಹೊಣೆ ಎಂದು ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಹೇಳಿದರು.

ಪಟ್ಟಣದ ಬಸ್ ನಿಲ್ದಾಣ ಸಮೀಪದ ಬಿಜೆಪಿ ಚುನಾವಣಾ ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರ 10 ವರ್ಷದ ಸಾಧನೆ ಹಾಗೂ ತಾವು ಇಲ್ಲಿಯವರೆಗೆ ಮಾಡಿರುವ ಅಭಿವೃದ್ಧಿ ಕೆಲಸದ ಮೇಲೆ ಮತಯಾಚನೆ ಮಾಡುತ್ತಿದ್ದೇವೆ ಎಂದರು.
ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ಅಭಿವೃದ್ಧಿ ಯೋಜನೆಗಳನ್ನು ತಮ್ಮದು ಎಂದು ರಾಜ್ಯ ಸರ್ಕಾರ ಹೈಜಾಕ್ ಮಾಡುತ್ತಿದೆ. ಗ್ಯಾರಂಟಿ ಮಂತ್ರ ಹಿಡಿದು ಜಪ ಮಾಡುತ್ತಿದೆ. ಇದು ಬಹುಕಾಲ ಉಳಿಯಲಾರದು. ಖಜಾನೆ ಖಾಲಿಯಾಗಿದೆ. ಇದರ ಲವಾಗಿ ಅಭಿವೃದ್ಧಿ ಮರೀಚಿಕೆ ಆಗಿದೆ ಎಂದು ಆರೋಪಿಸಿದರು.
ಈ ಬಾರಿ ಚುನಾವಣೆಯಲ್ಲಿ ಜೆಡಿಎಸ್ ಜತೆ ಮೈತ್ರಿ ಮಾಡಿಕೊಂಡಿದ್ದೇವೆ. ಕಾರ್ಯಕರ್ತರು ಹೊಂದಾಣಿಕೆ ಮಾಡಿಕೊಂಡು ಚುನಾವಣೆ ಎದುರಿಸಬೇಕು. ಜಾತಿ, ಧರ್ಮದ ಹೆಸರಿನಲ್ಲಿ ಮತಯಾಚನೆ ಮಾಡುವ ಕಾಲ ಮುಗಿದಿದೆ. ಕೇವಲ ಅಭಿವೃದ್ಧಿ ಮಂತ್ರದಿಂದ ಮತ ಕೇಳುತ್ತಿದ್ದೇವೆ ಎಂದರು.
ಶಾಸಕ ಆರಗ ಜ್ಞಾನೇಂದ್ರ, ಮಾಜಿ ಶಾಸಕರಾದ ಹರತಾಳು ಹಾಲಪ್ಪ, ಬಿ.ಸ್ವಾಮಿರಾವ್, ಜಿಲ್ಲಾಧ್ಯಕ್ಷ ಮೇಘರಾಜ್, ತಾಲೂಕು ಅಧ್ಯಕ್ಷ ಸುಬ್ರಹ್ಮಣ್ಯ, ಜೆಡಿಎಸ್ ತಾಲೂಕು ಅಧ್ಯಕ್ಷ ವರ್ತೇಶ್, ಪ್ರಮುಖರಾದ ದೇವಾನಂದ್, ಗಾಯತ್ರಿ ಮಲ್ಲಪ್ಪ, ಮಂಗಳಾ, ಮಂಡಾನಿ ಮೋಹನ್, ಎಂ.ವಿ.ಜಯರಾಮ್, ಸುಮತಿ, ಪೂಜಾರಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net