ಮೂಡುಬಿದಿರೆ: ಮಂಗಳವಾರ ರಾತ್ರಿ ತಾಲೂಕಾದ್ಯಂತ ಬೀಸಿದ ಭಾರಿ ಗಾಳಿ-ಮಳೆಗೆ ಮೂಡುಬಿದಿರೆ ತಾಲೂಕಿನ ವಿವಿಧ ಭಾಗಗಳಲ್ಲಿ ವ್ಯಾಪಕ ಹಾನಿ ಸಂಭವಿಸಿದೆ. ಹಲವೆಡೆ ಮನೆಗಳ ಮೇಲ್ಛಾವಣಿಗಳು ಹಾರಿ ಹೋಗಿದ್ದು, ಮರ, ವಿದ್ಯುತ್ ಕಂಬಗಳು ಧರೆಗೆ ಉರುಳಿವೆ. ಓರ್ವ ಯುವತಿ ಗಾಯಗೊಂಡಿದ್ದು, ವಿದ್ಯುತ್, ಸಂಚಾರ ವ್ಯವಸ್ಥೆಯಲ್ಲಿ ವ್ಯತ್ಯಯ ಉಂಟಾಗಿದೆ.