

ಮೈಸೂರು: ಇತ್ತೀಚೆಗೆ ನಿಧನರಾದ ಮಾಜಿ ಶಾಸಕ ವಾಸು ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರಿಗೆ ವಿಶ್ವಮಾನವ ಮೈಸೂರು ವಿಶ್ವವಿದ್ಯಾಲಯ ನೌಕರರ ವೇದಿಕೆ ವತಿಯಿಂದ ಶನಿವಾರ ನುಡಿನಮನ ಸಲ್ಲಿಸಲಾಯಿತು.
ವಿವಿ ಸಂಜೆ ಕಾಲೇಜು ಎದುರು ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಾಸು ಹಾಗೂ ಕೆ.ಶಿವರಾಂ ಅವರ ಭಾವಚಿತ್ರಕ್ಕೆ ಗಣ್ಯರು ಪುಷ್ಪಾರ್ಚನೆ ಮಾಡಿದರು.
ಪ್ರಾಚ್ಯ ವಿದ್ಯಾ ಸಂಶೋಧನಾಲಯ ಹಾಗೂ ಗಾಂಧಿ ಭವನದ ನಿವೃತ್ತ ನಿರ್ದೇಶಕ ಪ್ರೊ.ಎಸ್.ಶಿವರಾಜಪ್ಪ ಮಾತನಾಡಿ, ಶಿವರಾಂ ಅವರು ಐಎಎಸ್ ಪರೀಕ್ಷೆಯನ್ನು ಕನ್ನಡದಲ್ಲಿ ಬರೆದು ಪಾಸಾದ ಮೊದಲಿಗರಾದರೆ, ವಾಸು ಅವರು ಮೇಯರ್ ಹಾಗೂ ಶಾಸಕರಾಗಿ ಮೆಸೂರು ನಗರದ ಅಭಿವೃದ್ಧಿಗೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ ಎಂದು ಸ್ಮರಿಸಿದರು.