

ಗುವಾಹಟಿ: ತ್ರಿಪುರಾ ವಿಧಾನಸಭೆ ಅಧಿವೇಶನದ ವೇಳೆ ಬಿಜೆಪಿ ಶಾಸಕ ನೀಲಿ ಚಿತ್ರ ವೀಕ್ಷಿಸುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಬಾಗ್ಬಾಸ್ ಕ್ಷೇತ್ರದ ಬಿಜೆಪಿ ಶಾಸಕ ಜದವ್ ಲಾಲ್ನಾಥ್ ಬಜೆಟ್ ಅಧಿವೇಶನದ ವೇಳೆ ಚರರ್ಚೆ ನಡೆಯುತ್ತಿದ್ದ ಸಂದರ್ಭದಲ್ಲಿ ನೀಲಿ ಚಿತ್ರ ವೀಕ್ಷಿಸುತ್ತಿರುವುದು ವಿಡಿಯೋದಲ್ಲಿ ಸ್ಪಷ್ಟವಾಗಿ ಕಂಡು ಬಂದಿದೆ.
ನೀಲಿ ಚಿತ್ರ ವೀಕ್ಷಣೆ ಕುರಿತು ಖುದ್ದು ಹಾಜರಾಗಿ ಸ್ಪಷ್ಟನೆ ನೀಡುವಂತೆ ಶಾಸಕ ಜದವ್ ಲಾಲ್ ನಾಥ್ಗೆ ಸೂಚಿಸಿದೆ. ಅಶ್ಲೀಲ ಚಿತ್ರ ವೀಕ್ಷಣೆ ಕುರಿತು ಶಾಸಕ ನಾಥ್ ಈವರೆಗೆ ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.
ಬಿಜೆಪಿ ಶಾಸಕರ ಈ ನಡೆಗೆ ಸಾಕಷ್ಟು ಖಂಡನೆ ವ್ಯಕ್ತವಾಗಿದ್ದು ಜದವ್ ಲಾಲ್ನಾಥ್ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ವಿಪಕ್ಷಗಳು ಆಗ್ರಹಿಸಿವೆ.
ಇತ್ತೀಚಿಗೆ ಬಿಹಾರದ ರಾಜಧಅನಿ ಪಟ್ನಾ ರೈಲ್ವೆ ನಿಲ್ದಾಣದಲ್ಲಿ ಅಳವಡಿಸಲಾಗಿದ್ದ ಟಿವಿ ಪರದೆಗಳಲ್ಲಿ ಜಾಹಿರಾತು ಪ್ರಸಾರ ಮಾಡುವ ವೇಳೆ ನೀಲಿ ಚಿತ್ರ ಪ್ರದರ್ಶನವಾಗಿದ್ದಿ ಇತ್ತೀಚಿಗೆ ಸುದ್ದಿಯಾಗಿತ್ತು.