ಕೆ.ಆರ್.ಪೇಟೆಯಲ್ಲೂ ತೊಂದರೆ

KRP Bus
ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್‌ಗಳು ರಸ್ತೆಗಿಳಿಯದಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡಬೇಕಾಯಿತು. ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋದರು.
Published on

ಕೆ.ಆರ್.ಪೇಟೆ: ಕೆಎಸ್‌ಆರ್‌ಟಿಸಿ ನೌಕರರ ಮುಷ್ಕರದ ಹಿನ್ನೆಲೆಯಲ್ಲಿ ಮಂಗಳವಾರ ತಾಲೂಕಿನಲ್ಲಿ ರಸ್ತೆ ಸಾರಿಗೆ ಸಂಸ್ಥೆಯ ಯಾವುದೇ ಬಸ್‌ಗಳು ರಸ್ತೆಗಿಳಿಯದಿದ್ದರಿಂದ ವಿದ್ಯಾರ್ಥಿಗಳು ಹಾಗೂ ಪ್ರಯಾಣಿಕರು ಪರದಾಡಬೇಕಾಯಿತು. ಪ್ರಯಾಣಿಕರು ಖಾಸಗಿ ಬಸ್‌ಗಳ ಮೊರೆ ಹೋದರು.

ಪಟ್ಟಣದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದಲ್ಲಿ ಬಸ್‌ಗಳು ಇಲ್ಲದ ಕಾರಣದಿಂದ ನಿಲ್ದಾಣ ಬಿಕೋ ಎನ್ನುತ್ತಿತ್ತು. ಖಾಸಗಿ ವಾಹನಗಳು ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಬಸ್ ನಿಲ್ದಾಣದೊಳಗೆ ಬಂದು ಪ್ರಯಾಣಿಕರಿಗೆ ಸಾರಿಗೆ ಸಂಪರ್ಕ ಕಲ್ಪಿಸಕೊಡಲಾಯಿತು.

ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ನೌಕರರು ಅನಿರ್ದಿಷ್ಟ ಅವಧಿ ಮುಷ್ಕರ ನಡೆಸುತ್ತಿರುವ ಮಾಹಿತಿ ಇಲ್ಲದೆ ಬಸ್ ನಿಲ್ದಾಣಕ್ಕೆ ಆಗಮಿಸಿದ ಪ್ರಯಾಣಿಕರು ಹಾಗೂ ವಿದ್ಯಾರ್ಥಿಗಳು ವಾಹನಗಳ ಸಂಚಾರವು ಸಂಪೂರ್ಣವಾಗಿ ಸ್ತಗಿತವಾಗಿರುವುದರಿಂದ ಪ್ರಯಾಣಿಕರು ಪರದಾಡಬೇಕಾಯಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net