ಟ್ರ್ಯಾಕ್ಟರ್​​ಗೆ ಟ್ರಕ್ ಡಿಕ್ಕಿ: 8 ಮಂದಿ ಸಾವು, 43 ಜನರಿಗೆ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ.. truck hits tractor

43 injured as truck hits tractor
Published on

ಉತ್ತರಪ್ರದೇಶ: ( truck hits tractor )  ಬುಲಂದ್‌ಶಹರ್ ಜಿಲ್ಲೆಯಲ್ಲಿ ಸೋಮವಾರ ಬೆಳಗಿನ ಜಾವ ಯಾತ್ರಿಕರನ್ನು ಕರೆದೊಯ್ಯುತ್ತಿದ್ದ ಟ್ರ್ಯಾಕ್ಟರ್ ಟ್ರಾಲಿಗೆ ಟ್ರಕ್ ಡಿಕ್ಕಿ ಹೊಡೆದ ಪರಿಣಾಮ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದು, 43 ಜನರು ಗಾಯಗೊಂಡಿದ್ದಾರೆ.

ಮೃತರನ್ನು ಟ್ರ್ಯಾಕ್ಟರ್ ಚಾಲಕ ಬಾಬು (40), ರಾಂಬೆಟಿ (65), ಚಾಂದನಿ (12), ಘನಿರಾಮ್ (40), ಮೋಕ್ಷಿ (40), ಶಿವಾಂಶ್ (6), ಯೋಗೇಶ್ (50) ಮತ್ತು ವಿನೋದ್ (45) ಎಂದು ಗುರುತಿಸಲಾಗಿದ್ದು, ಎಲ್ಲರೂ ಕಾಸ್ಗಂಜ್ ಜಿಲ್ಲೆಯ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ. ಗಾಯಾಳುಗಳಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಗ್ರಾಮೀಣ) ದಿನೇಶ್ ಕುಮಾರ್ ಸಿಂಗ್ ಮಾತನಾಡಿ, ಟ್ರಾಕ್ಟರ್ ಟ್ರಾಲಿಯಲ್ಲಿ 61 ಜನರು ಕಾಸ್ಗಂಜ್ ಜಿಲ್ಲೆಯ ರಫತ್‌ಪುರ ಗ್ರಾಮದಿಂದ ರಾಜಸ್ಥಾನದ ಜಹರ್‌ಪೀರ್‌ಗೆ ತೀರ್ಥಯಾತ್ರೆಗೆ ಪ್ರಯಾಣಿಸುತ್ತಿದ್ದರು. ಬುಲಂದ್‌ಶಹರ್-ಅಲಿಗಢ ಗಡಿಯಲ್ಲಿ ಅರ್ನಿಯಾ ಬೈಪಾಸ್ ಬಳಿ ಬೆಳಗಿನ ಜಾವ 2.10 ರ ಸುಮಾರಿಗೆ ಈ ಅಪಘಾತ ಸಂಭವಿಸಿದ್ದು, ಕ್ಯಾಂಟರ್ ಟ್ರಕ್ ಹಿಂದಿನಿಂದ ಟ್ರ್ಯಾಕ್ಟರ್-ಟ್ರಾಲಿಗೆ ಡಿಕ್ಕಿ ಹೊಡೆದ ಪರಿಣಾಮ ಟ್ರ್ಯಾಕ್ಟರ್ ಟ್ರಾಲಿ ಪಲ್ಟಿಯಾಗಿದೆ ಎಂದಿದ್ದಾರೆ.

ಎಂಟು ಜನರು ಸಾವನ್ನಪ್ಪಿದ್ದಾರೆ, ಅವರಲ್ಲಿ 43 ಜನರು ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಗೊಂಡವರಲ್ಲಿ ಮೂವರ ಸ್ಥಿತಿ ಗಂಭೀರವಾಗಿದೆ. 10 ಜನರನ್ನು ಅಲಿಘರ್ ವೈದ್ಯಕೀಯ ಕಾಲೇಜಿಗೆ, 10 ಜನರನ್ನು ಬುಲಂದ್‌ಶಹರ್ ಜಿಲ್ಲಾ ಆಸ್ಪತ್ರೆಗೆ ಮತ್ತು 23 ಜನರನ್ನು ಖುರ್ಜಾದ ಕೈಲಾಶ್ ಆಸ್ಪತ್ರೆಗೆ ಕರೆದೊಯ್ಯಲಾಯಿತು. ಮೃತರ ಶವಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಹರಿಯಾಣದಲ್ಲಿ ನೋಂದಾಯಿಸಲಾದ ಲಾರಿಯನ್ನು ವಶಕ್ಕೆ ಪಡೆಯಲಾಗಿದ್ದು, ಮುಂದಿನ ಕಾನೂನು ಕ್ರಮಗಳನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net